Log In
BREAKING NEWS >
ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರದ ಸಮರ್ಪಣೆ-ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜೂನ್ 1ರಿ೦ದ 9ರವರೆಗೆ ಜರಗಲಿದೆ....

ಕೊಡಗು: ಆಹಾರ ಅರಸಿ ಬಂದ ಮೂರು ಕಾಡಾನೆ ಸಾವು

ಕೊಡಗು: ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನಾಲ್ಕೇರಿ ಎಂಬಲ್ಲಿ ನಡೆದಿದೆ.

ಕಾಡಿನಿಂದ ಆಹಾರ ಅರಸಿ ಬಂದ 2 ಕಾಡಾನೆಗಳ ಕಳೇಬರ ಕಾಫಿ ತೋಟದಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಆನೆ ಕೆರೆಯ ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಸ್ಥಳಕ್ಕೆ ಪೊನ್ನಂಪೇಟೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

No Comments

Leave A Comment