Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ಪಣಂಬೂರು:ಭೀಕರ ಅಪಘಾತ;ಓರ್ವ ಸಾವು,8 ಗಂಭೀರ

ಮಂಗಳೂರು: ನಿಂತಿದ್ದ ಟ್ಯಾಂಕರ್‌ಗೆ ಇನ್ನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಬೆಳಗ್ಗೆ ನಡೆದಿದೆ.

ವರದಿಯಾದಂತೆ ಬೆಳಗಾವಿ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಅವಘಡಕ್ಕೀಡಾಗಿದ್ದು ಚಾಲಕ ಹನುಮಂತಯ್ಯ ಸಾವನ್ನಪ್ಪಿರುವ ದುರ್ದೈವಿ.

8 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

 

No Comments

Leave A Comment