Log In
BREAKING NEWS >
ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರದ ಸಮರ್ಪಣೆ-ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜೂನ್ 1ರಿ೦ದ 9ರವರೆಗೆ ಜರಗಲಿದೆ....

ಕುವೈತ್ ನಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಭಾರತೀಯರೂ ಸೇರಿ 15 ಸಾವು

ಕುವೈತ್: ಕುವೈತ್ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಭಾರತೀಯರೂ ಸೇರಿದಂತೆ ಒಟ್ಟು 15 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ ಕುವೈತ್ ನಗರದಲ್ಲಿ ಪೆಟ್ರೋಲಿಯಂ ಕಾರ್ಖಾನೆಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಎರಡು ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 7 ಮಂದಿ ಭಾರತೀಯರು ಸೇರಿದಂತೆ ಒಟ್ಟು 15 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕೂಡಲೇ ಕುವೈತ್ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗಿದೆ ಎನ್ನಲಾಗಿದೆ.  ಅಂತೆಯೇ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಕಾರ್ಮಿಕರೆಲ್ಲರೂ ಕುವೈತ್ ಆಯಿಲ್ ಕಂಪನಿಯ ಕಾರ್ಮಿಕರು ಎಂದು ತಿಳಿದುಬಂದಿದೆ.
ಇನ್ನು ಮೃತ ಕಾರ್ಮಿಕರ ಪೈಕಿ 7ಭಾರತೀಯರಿದ್ದು, ಉಳಿದಂತೆ ಐದು ಮಂದಿ ಈಜಪ್ಟಿಯನ್ನರ ಮತ್ತು ಮೂವರು ಪಾಕಿಸ್ತಾನ ಮೂಲದ ಕಾರ್ಮಿಕರು ಎನ್ನಲಾಗಿದೆ. ಗಾಯಾಳುಗಳಲ್ಲಿ ಭಾರತೀಯರು ಮತ್ತು ಕುವೈತ್ ಪ್ರಜೆಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
No Comments

Leave A Comment