Log In
BREAKING NEWS >
ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರದ ಸಮರ್ಪಣೆ-ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜೂನ್ 1ರಿ೦ದ 9ರವರೆಗೆ ಜರಗಲಿದೆ....

3 ರಾಜ್ಯಗಳಲ್ಲಿ ಕಾಂಗ್ರೆಸ್‌ ಹಕ್ಕು ಮಂಡನೆ

ಪಾಟ್ನಾ/ಇಂಫಾಲ/ಪಣಜಿ: ಕರ್ನಾಟಕದ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನುಗಳಿಸಿದ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದೇ ತಡ, ಇತರೆ 3 ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಶುಕ್ರವಾರ ಬಿಹಾರ, ಮಣಿಪುರ ಮತ್ತು ಗೋವಾಗಳಲ್ಲಿ ಕಾಂಗ್ರೆಸ್‌ ರಾಜಭವನದ ಬಾಗಿಲು ತಟ್ಟಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಿದೆ. ಎಲ್ಲಾ ರಾಜ್ಯಗಳಲ್ಲಿಯೂ ಕರ್ನಾಟಕ ರಾಜ್ಯಪಾಲರ ನಡೆಯನ್ನೇ ಅನುಸರಿಸುವಂತೆ ಒತ್ತಾಯಿಸಲಾಗಿದೆ.

ಬಿಹಾರ ಬಿರುಸು
ಬಿಹಾರದಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರು ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌, ಹಿಂದುಸ್ತಾನಿ ಅವಾಮ್‌ ಮೋರ್ಚಾ,  ಸಿಪಿಐ (ಎಂಎಲ್‌) ಪಕ್ಷಗಳ ಒಟ್ಟು 111 ಶಾಸಕರ ಬೆಂಬಲ ನಮಗಿದೆ ಎಂದು ತೇಜಸ್ವಿ ಯಾದವ್‌ ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ. ಚುನಾವಣೆಗಿಂತಲೂ ಮೊದಲು ತಮ್ಮ ಪಕ್ಷ ಇತರ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಂಡಿತ್ತು ಎಂದೂ ಹೇಳಿದ್ದಾರೆ. “ಬಿಜೆಪಿ ಅತ್ಯಂತ ಹೆಚ್ಚಿನ ಸ್ಥಾನ ಗಳಿಸಿದೆ ಎಂಬ ಕಾರಣಕ್ಕೆ ರಾಜ್ಯಪಾಲರು ಆ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನಿಸಬಹು ದಾದರೆ, ಅದೇ ನಿಯಮವನ್ನು ಬಿಹಾರದಲ್ಲಿ ಯೂ ಏಕೆ ಅನುಸರಿಸಬಾರದು’ ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ. ಕಳೆದ ವರ್ಷ ಕಾಂಗ್ರೆಸ್‌-ಆರ್‌ಜೆಡಿ ಮೈತ್ರಿ ಕೂಟದಿಂದ ಹೊರ ಬಂದ ಜೆಡಿಯು ಮತ್ತೆ ಬಿಜೆಪಿ ಜತೆಗೂಡಿ ಸರ್ಕಾರ ರಚಿಸಿತ್ತು.

 

ಗೋವಾ ಹವಾ
ಬೀಚ್‌ ರಾಜ್ಯದಲ್ಲಿ ಕೂಡ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಚಂದ್ರಕಾಂತ್‌ ಕವಲೇಕರ್‌ ಶುಕ್ರವಾರ ರಾಜ್ಯಪಾಲೆ ಮೃದುಲಾ ಸಿನ್ಹಾರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಿದ್ದಾರೆ. ಏಳು ದಿನಗಳ ಒಳಗಾಗಿ ಮನವಿ ಪುರಸ್ಕರಿಸಿ ತೀರ್ಮಾನ ಕೈಗೊಳ್ಳಬೇ ಕೆಂದು ಕೋರಿಕೊಂಡಿದ್ದಾಗಿ ತಿಳಿಸಿದ್ದಾರೆ. 16 ಶಾಸಕರ ಪೈಕಿ 14 ಮಂದಿ ರಾಜ್ಯಪಾಲರ ಭೇಟಿ ಸಂದರ್ಭದಲ್ಲಿ ಇದ್ದರು. ಕಾಂಗ್ರೆಸ್‌ಗೆ 16 ಶಾಸಕರು ಇದ್ದರೂ, ಪಕ್ಷದ ನಾಯಕ ವಿಶ್ವಜಿತ್‌ ರಾಣೆ ಕಳೆದ ವರ್ಷ ಬಿಜೆಪಿಗೆ ಸೇರಿ, ವಾಲೊ³àಯಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸರ್ಕಾರ ರಚನೆಗೆ ಬೇಕಾದ ಸಂಖ್ಯಾ ಬಲ ನಮ್ಮ ಬಳಿ ಇದೆ. ವಿಧಾನಸಭೆಯಲ್ಲಿ ಬಹುಮತಕ್ಕೆ 21 ಶಾಸಕರ ಸ್ಥಾನ ಅಗತ್ಯವಿದೆ. ಅದನ್ನು ನಾವು ಸಾಬೀತು ಮಾಡುತ್ತೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಗಿರೀಶ್‌ ಚೊದಾಂಕರ್‌ ಹೇಳಿದ್ದಾರೆ.

ಮಣಿಪುರ ಮಥನ
ಮಣಿಪುರದಲ್ಲಿಯೂ ಮಾಜಿ ಮುಖ್ಯಮಂತ್ರಿ ಒಕ್ರಮ್‌ ಇಬೊಬಿ ಸಿಂಗ್‌ ನೇತೃತ್ವದ 9 ಕಾಂಗ್ರೆಸ್‌ ಶಾಸಕರ ನಿಯೋಗ ಹಂಗಾಮಿ ರಾಜ್ಯಪಾಲ ಜಗದೀಶ್‌ ಮುಖೀ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿತು. 2017ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ 21 ಸ್ಥಾನಗಳನ್ನು ಪಡೆದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಸದ್ಯ ಬಿಜೆಪಿ ಎನ್‌ಪಿಪಿ, ಎನ್‌ಪಿಎಫ್ ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಯ ಸರ್ಕಾರ ಅಸ್ತಿತ್ವದಲ್ಲಿದೆ.

 

ಮೇಘಾಲಯ ಮಿಂಚು
ಕರ್ನಾಟಕದಲ್ಲಿ ರಾಜ್ಯಪಾಲ ವಿ.ಆರ್‌.ವಾಲಾ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟದ್ದನ್ನು ಖಂಡಿಸಿ ಮೇಘಾಲಯದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಸಂವಿಧಾನದ ಮೂಲ ತತ್ವ ರಕ್ಷಿಸಲು ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ಗೆ ಮನವಿಯನ್ನೂ ಪಕ್ಷ ಕಳುಹಿಸಿ ಕೊಟ್ಟಿದೆ.

ವಾಲಾ ಮನೆ ಮುಂದೆ ಪ್ರತಿಭಟನೆ
ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರ ನಿವಾಸದ ಮುಂದೆ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ರಚಿಸುವಂತೆ ಬಿಜೆಪಿಗೆ ಆಹ್ವಾನ ನೀಡಿದ್ದನ್ನು ಖಂಡಿಸಿ, ವಾಲಾ ನಿವಾಸದ ಮುಂದೆ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಘೋಷಣೆಗಳನ್ನು ಕೂಗತೊಡಗಿದರು. ಕೊನೆಗೆ 30 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿಯ ಕುತಂತ್ರಕ್ಕೆ ಕೋರ್ಟ್‌ ಸರಿಯಾಗಿಯೇ ಉತ್ತರ ಕೊಟ್ಟಿದೆ. ಜತೆಗೆ, ರಾಜ್ಯಪಾಲರ ನಿಲುವು ಅಸಾಂವಿಧಾನಿಕ ಎಂಬುದೂ ಸಾಬೀತಾಗಿದೆ.
ರಾಹುಲ್‌ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ

ಸರ್ಕಾರ ರಚಿಸುವಂತೆ ಬಿಜೆಪಿಗೆ ಆಹ್ವಾನ ಕೊಟ್ಟ ತಪ್ಪಿಗೆ ಕರ್ನಾಟಕ ರಾಜ್ಯಪಾಲ ವಾಲಾ ಅವರು ಕೂಡಲೇ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕು.
ಎಂ.ಕೆ.ಸ್ಟಾಲಿನ್‌, ಡಿಎಂಕೆ ಕಾರ್ಯಾಧ್ಯಕ್ಷ

ಮೋದಿ ಸರ್ಕಾರದ ಅವಧಿಯಲ್ಲಿ ಸಾಂವಿಧಾನಿಕ ಮೌಲ್ಯಗಳು  ಅಪಾಯದಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಂದಾಗಿ ಬಿಜೆಪಿಯನ್ನು ಸೋಲಿಸಬೇಕಿದೆ.
ಶರದ್‌ ಯಾದವ್‌, ಜೆಡಿಯು ನಾಯಕ

ಸಂವಿಧಾನ ಗೆದ್ದಿತು, ಪ್ರಜಾಪ್ರಭುತ್ವ ಮರುಸ್ಥಾಪನೆಯಾಯಿತು.  ಬಿಎ ಸ್‌ ವೈ ಒಂದು ದಿನದ ಸಿಎಂ ಆಗಿ ಉಳಿಯುತ್ತಾರೆ. ಸಂವಿಧಾನವು ರಾಜ್ಯಪಾಲರ  ನಿರ್ಧಾರ ತಿರಸ್ಕರಿಸಿದೆ.
ರಣದೀಪ್‌ ಸುಜೇìವಾಲಾ, ಕಾಂಗ್ರೆಸ್‌ 

 ಸಿಜೆಐ ವಿರುದ್ಧ ಮಹಾಭಿಯೋಗಕ್ಕೆ ಮುಂದಾಗಿದ್ದ, ಸುಪ್ರೀಂ ಕೋರ್ಟ್‌ ಅನ್ನು ಅವಮಾನಿಸಿದ್ದ ಕಾಂಗ್ರೆಸ್ಸಿಗರು ಈಗ ಸುಪ್ರೀಂ ಕೋರ್ಟ್‌ ಅನ್ನು ಹಾಡಿಹೊಗಳುತ್ತಿದ್ದಾರೆ.
ಸಂಬಿತ್‌ ಪಾತ್ರಾ, ಬಿಜೆಪಿ ವಕ್ತಾರ

Read more at https://www.udayavani.com/kannada/news/national-news/294662/congress-claims-in-3-states#zuF34isUDl2xg4hR.99

No Comments

Leave A Comment