Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ಇಶ್ರತ್ ಜಹಾನ್ ಪ್ರಕರಣ: ಪ್ರಧಾನಿ ಮೋದಿ ಬಂಧಿಸಲು ಸಿಬಿಐ ಉದ್ದೇಶಿಸಿತ್ತು; ಮಾಜಿ ಡಿಐಜಿ ಸ್ಫೋಟಕ ಮಾಹಿತಿ

ಅಹಮದಾಬಾದ್: ಇಶ್ರತ್ ಜಹಾನ್ ನಕಲಿ ಎನ್’ಕೌಂಟರ್ ಆರೋಪ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಬಂಧನಕ್ಕೊಳಪಡಿಸಲು ಸಿಬಿಐ ಬಯಸಿತ್ತು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ.
ಇಶ್ರತ್ ಜಹಾನ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಡಿಐಜಿ ವಂಝಾರಾ ಅವರು ನ್ಯಾಯಾಲಯದ ಮುಂದೆ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಇಶ್ರತ್ ಜಹಾನ್ ಪ್ರಕರಣದಲ್ಲಿ ಅಂದಿನ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾಗಿದ್ದ ಅಮಿತ್ ಶಾ ಅವರನ್ನು ಬಂಧಿಸಲು ಸಿಬಿಐ ನಿರ್ಧರಿಸಿದ್ದು ಎಂದು ವಂಜಾರಾ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇಶ್ರತ್ ಜಹಾನ್ ಪ್ರಕರಣದಿಂದ ತಮ್ಮ ಹೆಸರನ್ನು ಕೈ ಬಿಡುವಂತೆ ಕೋರಿ ವಂಝಾರಾ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತ ವಿಚಾರಣೆ ವೇಲೆ ವಂಝಾರಾ ಅವರು ಈ ರೀತಿಯ ಹೇಳಿಕೆಯನ್ನು ನೀಡಿದ್ದು, ವಂಝಾರಾ ಅವರ ಹೇಳಿಕೆ ಇದೀಗ ಭಾರೀ ಸಂಚಲನವನ್ನು ಮೂಡಿಸಿದೆ.
ಮೋದಿ ಹಾಗೂ ಅಮಿತ್ ಶಾ ಅವರನ್ನು ಸಿಬಿಐ ಬಂಧಿಸಲು ನಿರ್ಧರಿಸಿತ್ತು. ಆದರೆ, ಅದೃಷ್ಟವಶಾತ್ ಬಂಧಿಸಿರಲಿಲ್ಲ ಎಂದು ತಿಳಿಸಿದ್ದಾರೆ.
No Comments

Leave A Comment