Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ಪ್ಲಾಸ್ಟಿಕ್‌ ಬಾಟಲಿ ನಿಷೇಧಕ್ಕೆ ಆದೇಶ

ಬೆಂಗಳೂರು: ರಾಜ್ಯ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಅಧೀನಕ್ಕೆ ಬರುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲ್‌ಗ‌ಳನ್ನು ಬಳಸದಂತೆ ನಿರ್ದೇಶನಾಲಯ ಆದೇಶಿದೆ. ರಾಜ್ಯದಲ್ಲಿ ಪ್ಲಾಸ್ಟಿಕ್‌ ಬಳಕೆಯಿಂದ ಉಂಟಾಗುತ್ತಿರುವ ಸಮಸ್ಯೆ ತಡೆಯುವ ದೃಷ್ಟಿಯಿಂದ ಪ್ಲಾಸ್ಟಿಕ್‌ ಬಳಕೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ಪ್ಲಾಸ್ಟಿಕ್‌ ಚಮಚ, ತಟ್ಟೆ, ಲೋಟ ಇತ್ಯಾದಿ ಸೇರಿ ಯಾವುದೇ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದಂತೆ ಈ ಹಿಂದೆಯೇ ಆದೇಶಿಸಲಾಗಿತ್ತು. ಅದರಂತೆ ತಾಂತ್ರಿಕ ಶಿಕ್ಷಣ ಇಲಾಖೆಯ ತನ್ನ ಅಧೀನದ ಪಾಲಿಟೆಕ್ನಿಕ್‌ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲ್‌ ಬಳಸದೆ ಸ್ಟೀಲ್‌ ಲೋಟಗಳನ್ನು ಬಳಸುವಂತೆ ಸೂಚಿಸಿದೆ.

ಕಾಲೇಜಿನಲ್ಲಿ ನಡೆಯುವ ಸಭೆ, ಸಮಾರಂಭ, ವಿಚಾರ ಸಂಕಿರಣ ಮೊದಲಾದ ಕಾರ್ಯಕ್ರಮ ದಲ್ಲೂ ಪ್ಲಾಸ್ಟಿಕ್‌ ನೀರಿನ ಬಾಟಲ್‌ ಬಳಸಬಾರದು ಎಂದು ಹೇಳಿರುವ ನಿರ್ದೇಶನಾಲಯ, ಪ್ಲಾಸ್ಟಿಕ್‌ ಬಳಕೆ ತಗ್ಗಿಸುವ ನಿಟ್ಟಿನಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತೆ ಕಾಲೇಜಿನ ಪ್ರಾಚಾರ್ಯರಿಗೆ ನಿರ್ದೇಶಿಸಿದೆ.

No Comments

Leave A Comment