Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧೇಯಕ ಮಂಡನೆಗೆ ಕೇಂದ್ರ ಸಂಪುಟ ಸಮ್ಮತಿ!

  • ನವದೆಹಲಿ: 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
    ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧೇಯಕ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
    ಪ್ರಸ್ತಾವಿತ ‘ಕ್ರಿಮಿನಲ್ ಕಾನೂನು(ತಿದ್ದುಪಡಿ) ವಿಧೇಯಕ-2018ಕ್ಕೆ ಸಂಸತ್ ಅನುಮೋದನೆ ದೊರೆತ ಬಳಿಕ ಕಳೆದ ಏಪ್ರಿಲ್ 21ರಂದು ಕಠುವಾ ಅತ್ಯಾಚಾರದ ಬಳಿಕ ಸರ್ಕಾರ ಈ ಸಂಬಂಧ ಹೊರಡಿಸಿದ್ದ ಸುಗ್ರೀವಾಜ್ಞೆಯ ಸ್ಥಾನವನ್ನು ಅದು ತುಂಬಲಿದೆ ಎಂದರು.
    ಹೊಸ ವಿಧೇಯಕದ ಪ್ರಕಾರ, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ವಯಸ್ಸು 16 ವರ್ಷಕ್ಕಿಂತಲೂ ಕಡಿಮೆ ಇದ್ದರೆ, ಅಂತಹ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣವನ್ನು 10 ರಿಂದ 20 ವರ್ಷಕ್ಕೆ ಹೆಚ್ಚಿಸಲಾಗಿದೆ. ಸಂಪೂರ್ಣ ಜೀವಾವಧಿ ಶಿಕ್ಷೆಯನ್ನೂ ವಿಧಿಸಲು ಅವಕಾಶವಿದೆ.
No Comments

Leave A Comment