Log In
BREAKING NEWS >
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!....

ಪುಣೆಯಲ್ಲಿ 30 ವರ್ಷ ಹಳೆಯ ಕಟ್ಟಡ ಕುಸಿತ; 5 ಸಾವು, ಹಲವರಿಗೆ ಗಾಯ

ಪುಣೆ : ನಗರದ ಮುಂಧ್ವಾ ಪ್ರದೇಶದಲ್ಲಿ ಇಂದು ಶನಿವಾರ ಬೆಳಗ್ಗೆ 30 ವರ್ಷ ಹಳೆಯ ಕಟ್ಟಡ ಕುಸಿದು ಬಿದ್ದು ಐವರು ಮೃತಪಟ್ಟು ಹಲವರು ಗಾಯಗೊಂಡರು.

ಕಟ್ಟಡ ಕುಸಿದ ಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಕುಸಿದ ಕಟ್ಟಡದ ಅವಶೇಷಗಳಡಿಯಿಂದ ಕನಿಷ್ಠ 8 ಮಂದಿಯನ್ನು ಮೇಲಕ್ಕೆತ್ತಿ ರಕ್ಷಿಸಲಾಯಿತು. ಮಗುವೊಂದು ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ವರದಿಯಾಗಿದೆ.

ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

30 ವರ್ಷ ಹಳೆಯದಾಗಿರುವ ಈ ಕಟ್ಟಡ ಅತ್ಯಂತ ಜೀರ್ಣಾವಸ್ಥೆಗೆ ತಲುಪಿದ್ದು ಇದನ್ನು ಕೆಡಹಬೇಕೆಂದು ಸಿಟಿ ಮುನಿಸಿಪಲ್‌ ಕೌನ್ಸಿಲ್‌ ನೊಟೀಸ್‌ ಜಾರಿ ಮಾಡಿತ್ತು ಎಂದು ಎಎನ್‌ಐ ವರದಿ ತಿಳಿಸಿದೆ.

No Comments

Leave A Comment