Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಥಾಯ್ಲೆಂಡ್: ಲಾವೋಸ್ ಡ್ಯಾಮ್ ಕುಸಿದು ಭೀಕರ ಪ್ರವಾಹ, 17ಕ್ಕೂ ಹೆಚ್ಚು ಸಾವು, ನೂರಾರು ಮಂದಿ ನಾಪತ್ತೆ

ಬ್ಯಾಂಕಾಕ್: ಥಾಯ್ಲೆಂಡ್ ನ ಬೃಹತ್ ಡ್ಯಾಂ ಕುಸಿದ ಪರಿಣಾಮ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ವರೆಗೂ ಸುಮಾರು 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಥಾಯ್ಲೆಂಡ್ ನ ಅಟಾಪೂ ಪ್ರಾಂತ್ಯದಲ್ಲಿ ನಿರ್ಮಿಸಲಾಗಿರುವ ಬೃಹತ್ ಲಾವೋಸ್ ಡ್ಯಾಮ್ ಕುಸಿದಿದ್ದು, ಡ್ಯಾಂನಲ್ಲಿದ್ದ ಬೃಹತ್ ಪ್ರಮಾಣದ ನೀರು ಸಮೀಪದ ಗ್ರಾಮಗಳಿಗೆ ನುಗ್ಗಿದ ಪರಿಣಾಮ ಭೀಕರ ಪ್ರವಾಹ ಎದುರಾಗಿದೆ. ಪರಿಣಾಮ ಸುತ್ತಮುತ್ತಲ ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಹಲವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಮೂಲಗಳ ಪ್ರಕಾರ ಈ ವರೆಗೂ ಸುಮಾರು 20ಕ್ಕೂ ಅಧಿಕ ಮೃತದೇಹಗಳು ಪತ್ತೆಯಾಗಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಸ್ಥಳೀಯ ಜಿಲ್ಲಾಡಳಿತ ಮತ್ತು ನೈಸರ್ಗಿಕ ಪ್ರಕೃತಿ ವಿಕೋಪ ನಿಯಂತ್ರಣ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ, ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಯಾಂತ್ರಿಕ ಬೋಟ್ ಗಳು, ಹೆಲಿಕಾಪ್ಟರ್ ಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕ್ಸೆ ನಾಮ್ನೋಯ್ ಡ್ಯಾಂ ಕುಸಿದ ಪರಿಣಾಮ ಸುತ್ತಮುತ್ತಲಿನ ಸುಮಾರು 8 ಗ್ರಾಮಗಳು ನೀರಿನಲ್ಲಿ ಮುಳುಗಿದ್ದು  ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಪ್ರವಾಹದಲ್ಲಿ ಸಿಲುಕಿದ್ದಾರೆ. ನೀರಿನಿಂದ ರಕ್ಷಣೆಗೆ ಅಲ್ಲಲ್ಲಿ ಹಲವು ಮನೆಗಳ ಮೇಲೆ ಹತ್ತಿ ಕುಳಿತಿದ್ದು, ಮತ್ತೆ ಕೆಲವರು ತೆಪ್ಪಗಳ ಮೂಲಕ ಸುರಕ್ಷಿತ ಪ್ರದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ.
No Comments

Leave A Comment