Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ರಾಯ್‌ಘಡ್‌:500 ಅಡಿ ಕಂದಕಕ್ಕೆ ಬಿದ್ದ ಬಸ್‌;ಕೃಷಿ ವಿವಿಯ 20 ಮಂದಿ ಬಲಿ

ರಾಯ್‌ಘಡ್‌ (ಮಹಾರಾಷ್ಟ್ರ): ಪ್ರವಾಸಿಗರಿದ್ದ ಬಸ್ಸೊಂದು ಮಹಾಬಲೇಶ್ವರದ ಪೋಲಾದ್‌ಪುರ್‌ ಘಾಟ್‌ನಲ್ಲಿ 500 ಅಡಿ ಆಳದ ಪ್ರಪಾತಕ್ಕೆ ಬಿದ್ದು  ಕನಿಷ್ಠ 20 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ದಾಪೋಲಿ ಕೃಷಿ ವಿವಿಯ ಸಿಬಂದಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಬಸ್‌ ದುರಂತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ಸ್ಪಷ್ಟವಾಗಿದೆ. ಬಸ್‌ನಲ್ಲಿ ಒಟ್ಟು 33 ಮಂದಿ ಇದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪುಣೆಯಿಂದ ಎನ್‌ಡಿಆರ್‌ಎಫ್ ತಂಡ, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

ಹೆಚ್ಚಿನವರು ಗಂಭೀರವಾಗಿ ಗಾಯಗೊಂಡಿರುವ ಸಾಧ್ಯತೆಗಳಿದ್ದು , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

No Comments

Leave A Comment