Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಸೇತುವೆ ಮೇಲೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಹೋಯ್ತು ಕಾರು!

ಕಾರವಾರ: ಆಕಸ್ಮಿಕ ಬೆಂಕಿ ತಗುಲಿ ಚಲಿಸುತ್ತಿದ್ದ ಕಾರೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ದಿವಗಿ ಸೇತುವೆ ಬಳಿ ನಡೆದಿದೆ.

ಗೋವಾ ಮೂಲದ ಜಗದೀಶ್ ಅವರಿಗೆ ಸೇರಿದ್ದ ಕಾರು ಇದಾಗಿದ್ದು, ಇವರು ಭಟ್ಕಳದ ಕಡೆಗೆ ಪ್ರಯಾಣಿಸುತ್ತಿದ್ದರು. ಕುಮಟಾದ ದಿವಗಿ ಸೇತುವೆ ಬಳಿ ಹೋಗುತ್ತಿದ್ದಂತೆ ಕಾರಿನ ಸ್ಟೇರಿಂಗ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಜಗದೀಶ್ ಅವರು ತಕ್ಷಣ ಕಾರಿನಿಂದ ಕೆಳಗಿಳಿದಿದ್ದಾರೆ. ನಂತರ ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಸದ್ಯ ಈ ಬೆಂಕಿ ಅವಘಡದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment