Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ- 7 ದಿನ ಸರ್ಕಾರಿ ಶೋಕಾಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಜೊತೆಗೆ ಆಗಸ್ಟ್ 16 ರಿಂದ 22ರವರೆಗೆ ರಾಜ್ಯದಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಕೈಗೊಳ್ಳಬೇಕು ಎಂದು ಆದೇಶ ಹೊರಡಿಸಿದೆ.

ಗುರುವಾರದಿಂದ 7 ದಿನಗಳ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸರ್ಕಾರ ಪ್ರಕಟಿಸಿದೆ.

ರಾಜ್ಯದ ಹಲವೆಡೆ ಪ್ರವಾಹ ಎದುರಾಗಿದ್ದು, ತುರ್ತು ಪರಿಸ್ಥಿತಿ ನಿಭಾಯಿಸುವ ಹಾಗೂ ಪರಿಹಾರ ಒದಗಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ಹೊರತು ಪಡಿಸಿ, ಉಳಿದವರಿಗೆ ಅನ್ವಯಿಸುವಂತೆ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಆಗಸ್ಟ್ 17ರಂದು ಒಂದು ದಿನ ರಜೆ ಘೋಷಿಸಲಾಗಿದೆ.

ಕೌನ್ಸೆಲಿಂಗ್ ಮುಂದೂಡಿಕೆ:
ಆ.17 ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯ ವಿಜ್ಞಾನ ನಿಕಾಯದ ಕೌನ್ಸೆಲಿಂಗ್ ಮುಂದೂಡಲಾಗಿದೆ. ಮುಂದೂಡಿದ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.

No Comments

Leave A Comment