Log In
BREAKING NEWS >
``````````ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ ``````

ತೆಲಂಗಾಣದಲ್ಲಿ ಭೀಕರ ಅಪಘಾತ: ಪಲ್ಟಿ ಹೊಡೆದ ಸರ್ಕಾರಿ ಬಸ್, 40 ಮಂದಿ ಸಾವು, ಹಲವರಿಗೆ ಗಾಯ

ಕೊಂಡಗಟ್ಟು (ತೆಲಂಗಾಣ): ತೆಲಂಗಾಣ ರಾಜ್ಯದ ಕೊಂಡಗಟ್ಟು ಘತ್ರೊದಾದ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ವೊಂದು ಪಲ್ಟಿ ಹೊಡೆದ ಪರಿಣಾಮ 40 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಸರ್ಕಾರಿ ಬಸ್ ಶನಿವಾರಂ ಪೇಟ್ ನಿಂದ ಜಗತಿಯಾಲ್’ಗೆ ಸಾಗುತ್ತಿತ್ತು. ಘತ್ರೋದಾದ್ ಬಳಿ ಸಾಗುತ್ತಿದ್ದ ಆರ್’ಟಿಸಿ ಬಸ್ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಗಾಯಗೊಂಡವರನ್ನು ಜಗತಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment