Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಮಂಡ್ಯ:ಸಾಲಬಾಧೆಗೆ ಒಂದೇ ರೈತ ಕುಟುಂಬದ ನಾಲ್ವರ ಆತ್ಮಹತ್ಯೆ

ಪಾಂಡವಪುರ: ಸಾಲಮನ್ನಾ ಆದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಮುಂದುವರಿದಿದ್ದು, ಜೆಡಿಎಸ್‌ನ ಭದ್ರಕೋಟೆ ಎನಿಸಿರುವ ಮಂಡ್ಯ ಜಿಲ್ಲೆಯಲ್ಲಿ  ಒಂದೇ ಕುಟುಂಬದ ನಾಲ್ವರು ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾಂಡವಪುರದ ಸುಂಕಾತಣ್ಣೂರು ಗ್ರಾಮದಲ್ಲಿ ರೈತ ದಂಪತಿ ನಂದೀಶ್‌(35) ಮತ್ತು ಕೋಮಲಾ(28)ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಕ್ಕಳಾದ ಚಂದನಾ(10)  ಮೀನಾ (13) ಗೆ ವಿಷ ಉಣಿಸಿ ಹತ್ಯೆಗೈದಿದ್ದಾರೆ.

ನಂದೀಶ್‌ ವಾರದ ಹಿಂದೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿದ್ದರು ಎಂದು ತಿಳಿದು ಬಂದಿದೆ.

ಬ್ಯಾಂಕ್‌ ಸೇರಿ ವಿವಿಧೆಡೆ ಸುಮಾರು 5 ಲಕ್ಷ ರೂಪಾಯಿ ಸಾಲವನ್ನು ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಮೇಲುಕೊಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment