Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ರೀಲ್‌ ಅಲ್ಲ ರಿಯಲ್‌ :ರಾತ್ರೋ ರಾತ್ರಿ ನಟ ದುನಿಯಾ ವಿಜಿ ಅರೆಸ್ಟ್‌!

ಬೆಂಗಳೂರು: ನಗರದ ಅಂಬೇಡ್ಕರ್‌ ಭವನದಲ್ಲಿ  ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ ಖ್ಯಾತ ನಟ ದುನಿಯಾ ವಿಜಯ್‌ ಮತ್ತು ಬೆಂಬಲಿಗರ ಬಂಧನಕ್ಕೆ ಕಾರಣವಾಗಿದೆ.

ಜಿಮ್‌ ಟ್ರೈನರ್‌ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.

ಅಂಬೇಡ್ಕರ್‌ ಭವನದಲ್ಲಿ ಬಾಡಿ ಬಿಲ್ಡಿಂಗ್‌ ಸ್ಪರ್ಧೆ ನಡೆಯುತ್ತಿದ್ದ ವೇಳೆ ಜಗಳ ಆರಂಭವಾಗಿದ್ದು ಆ ಬಳಿಕ ಮಾರುತಿಗೆ ದುನಿಯಾ ವಿಜಿ ಅವಾಚ್ಯ ಶಬ್ಧಗಳಿಂದ ಬೈದು ಕಾರಿನಲ್ಲಿ ಅಪಹರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.

ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದ್ದು , ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದುನಿಯಾ ವಿಜಯ್‌ ಸೇರಿ ಮೂವರನ್ನು ಬಂಧಿಸಿದ್ದಾರೆ.

ಎಸಿಪಿ ರವಿಶಂಕರ್‌ ಅವರು ದುನಿಯಾ ವಿಜಯ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಪ್ರಸಾದ್‌ ಎನ್ನುವ ವ್ಯಕ್ತಿ ಜಗಳಕ್ಕೆ ಕಾರಣ ಎಂದು ಪಾನಿಪುರಿ ಕಿಟ್ಟಿ ಹೇಳಿಕೆ ನೀಡಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ  ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿತ್ತು.

No Comments

Leave A Comment