Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

11 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕೊಪ್ಪಳ: ಪತಿಯ ಕಿರುಕುಳ ತಾಳಲಾರದೆ ಮಹಿಳೆಯೊಬ್ಬಳು 11 ತಿಂಗಳ ಮಗುವಿನೊಂದಿಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ನಡೆದಿದೆ.

ತೇಜಸ್ವಿನಿ(23) ಮತ್ತು ವರ್ಷಿಣಿ (11)ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಕಿರಣ್‌ ವಿರುದ್ಧ ಕಿರುಕುಳದ ಆರೋಪ ಕೇಳಿ ಬಂದಿದೆ.

ಕಿರಣ್‌ ಮೊದಲ ಪತ್ನಿಯನ್ನು ತೊರೆದ ಬಳಿಕ ತೇಜಸ್ವಿನಿ ಅವರನ್ನು 2 ನೇ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ತೇಜಸ್ವಿನಿ ಆಂಧ್ರ ಮೂಲದವರಾಗಿದ್ದಾರೆ.

ಕಿರಣ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment