Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ತಿರುಚೆಂಬೂರು ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಿಎಂ- ಮುಂದುವರಿದ ಎಚ್‌ಡಿಕೆ ಟೆಂಪಲ್‌ ರನ್‌ 

ತೂತುಕುಡಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಕುಟುಂಬ ಸಮೇತರಾಗಿ ತಮಿಳುನಾಡಿನ ಐತಿಹಾಸಿಕ ತಿರುಚೆಂಬೂರು ಮುರುಗನ್‌ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಾಲಯದಲ್ಲಿ ಸಿಬಂದಿಗಳು ಮತ್ತು ಅರ್ಚಕರು ಆತ್ಮೀಯವಾಗಿ ಬರಮಾಡಿಕೊಂಡರು. ದೇವಾಲಯದ ಬಳಿ ವಿಶೇಷ ಭದ್ರತೆ ಕೈಗೊಳ್ಳಲಾಗಿತ್ತು.

ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಿಎಂ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖೀಲ್‌  ಅವರೊಂದಿಗೆ ತೆರಳಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ರಾಜ್ಯ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಸರ್ಕಾರ ಸುಭದ್ರವಾಗಿದೆ ಎಂದರು.

No Comments

Leave A Comment