Log In
BREAKING NEWS >
ಇ೦ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರ 123ನೇ ಪ್ರತಿಷ್ಠಾ ವರ್ಧ೦ತೋತ್ಸವ-ಪ೦ಚಾಮೃತ ಅಭಿಷೇಕ-ಶತಕಲಾಭಿಷೇಕ-ಮಹಾಪೂಜೆ-ಮಹಾ ಸಮಾರಾಧನೆಯೊ೦ದಿಗೆ ರಾತ್ರಿ ಪೇಟೆ ಉತ್ಸವ ಕಾರ್ಯಕ್ರಮ... ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ

ಕೋಲ್ಕತಾ : ಮಾರುಕಟ್ಟೆಯಲ್ಲಿ ಸ್ಫೋಟ ;1 ಸಾವು, ಹಲವರಿಗೆ ಗಾಯ

ಕೋಲ್ಕತಾ:ನಗರದ ಉತ್ತರಭಾಗಕ್ಕಿರುವ ಹೊರವಲಯದ ನಾಗೇರ್‌ ಬಜಾರ್‌ ಎಂಬ ಮಾರುಕಟ್ಟೆಯಲ್ಲಿ ಮಂಗಳವಾರ ಸ್ಫೋಟವೊಂದು ಸಂಭವಿಸಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 

ಹಣ್ಣಿನ ಅಂಗಡಿಯೊಂದರಲ್ಲಿ  ಭಾರಿ ಸ್ಫೋಟ ಸಂಭವಿಸಿದ್ದು, ಏಕಾಏಕಿ ಆದ ಸ್ಫೋಟದಿಂದ ಪಾದಾಚಾರಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಬಾಂಬ್‌ ನಿಷ್ಕ್ರೀಯ ದಳ ಆಗಮಿಸಿದ್ದು, ಘಟನೆ ಕುರಿತಾಗಿ ಸಿಐಡಿ ತನಿಖೆ ನಡೆಸಲಾಗುತ್ತಿದೆ.

ದಾಳಿ ನನ್ನನ್ನು ಗುರಿಯಾಗಿರಿಸಿಕೊಂಡು ನಡೆಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್‌ ಸ್ಥಳೀಯ ನಾಯಕ ಪಾಂಚು ಗೋಪಾಲ್‌ ರಾಯ್‌ ಹೇಳಿಕೊಂಡಿದ್ದಾರೆ.

No Comments

Leave A Comment