Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಕೋಲ್ಕತಾ ಮೆಡಿಕಲ್‌ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ;250 ಮಂದಿ ರಕ್ಷಣೆ

ಕೋಲ್ಕತಾ: ನಗರದ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ 10 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಆಗಮಿಸಿದ್ದು ಬೆಂಕಿ ನಂದಿಸುವಲ್ಲಿ ನಿರತವಾಗಿವೆ.

ವಿವಿಧ ಬ್ಲಾಕ್‌ಗಳಲ್ಲಿ ಸಿಲುಕಿದ್ದ 250 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.

ಔಷಧಾಲಯ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕಟ್ಟಡಕ್ಕೆ ವ್ಯಾಪಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ.

ಕೆಲ ರೋಗಿಗಳು ಕಿಟಕಿಗಳಿಂದ ಜಿಗಿದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯ ಮುಂದುವರಿದಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

No Comments

Leave A Comment