Log In
BREAKING NEWS >
ಮೇ 29ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ....ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್....

ಪತ್ರಕರ್ತೆ ಪ್ರಿಯಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಕ್ಬರ್

ನವದೆಹಲಿ: ಲೈಂಗಿಕ ಕಿರುಕುಳ ನೀಡಿರುವುದಾಗಿ ಹಲವು ಮಹಿಳೆಯರು ಆರೋಪಿಸಿದ್ದ ಹಿನ್ನೆಲೆಯಲ್ಲಿ ಇದೀಗ ವಿದೇಶಾಂಗ ಖಾತೆ ರಾಜ್ಯ ಸಚಿವ ಹಾಗೂ ಮಾಜಿ ಪತ್ರಕರ್ತ ಎಂಜೆ ಅಕ್ಬರ್ ಅವರು ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ದೇಶಾದ್ಯಂತ ಸಂಚಲನ ಮೂಡಿಸಿದ್ದ ಮೀ ಟೂ ಅಭಿಯಾನದಡಿಯಲ್ಲಿ ಬಾಲಿವುಡ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಲೈಂಗಿಕ ಕಿರುಕುಳ ಅನುಭವಿಸಿದ್ದವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಆರೋಪಿಸುವ ಮೂಲಕ ಘಟಾನುಘಟಿಗಳ ಹೆಸರು ತಳುಕುಹಾಕಿಕೊಂಡಿತ್ತು.

ಪತ್ರಕರ್ತೆ ಪ್ರಿಯಾ ರಮಣಿ ಅವರು ಎಂಜೆ ಅಕ್ಬರ್ ವಿರುದ್ದ ಆರೋಪಿಸಿದ್ದ ಮೊದಲ ಮಹಿಳೆಯಾಗಿದ್ದರು. ಬಳಿಕ ತಾವೂ ಕೂಡಾ ಹಲವು ವಿಧದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ 15 ಮಂದಿ ಮಹಿಳೆಯರು ಆರೋಪಿಸಿದ್ದರು.

ಅಕ್ಬರ್ ಅವರು ಸಚಿವರಾಗುವ ಮುನ್ನ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ್ದರು. ಹಲವು ಪತ್ರಿಕೆಗಳಲ್ಲಿ ಹಿರಿಯ ಹುದ್ದೆಯನ್ನು ಅಲಂಕರಿಸಿದ್ದರು.

No Comments

Leave A Comment