Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಶಬರಿಮಲೆಗೆ ತೆರಳುತ್ತಿದ್ದ ಮಹಿಳೆಯರ, ಪತ್ರಕರ್ತೆಯರ ಮೇಲೆ ದಾಳಿ, ವಾಹನಗಳಿಗೆ ಹಾನಿ

ತಿರುವನಂತಪುರ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ನಿಳಕ್ಕಲ್ ನಲ್ಲಿ ಮಹಿಳೆಯರ ಮತ್ತು ವರದಿಗಾರರ ಮೇಲೆ ದಾಳಿ ನಡೆಸಿದ್ದು, ಹಲವು ವಾಹನಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಿಪಬ್ಲಿಕ್ ಟಿವಿ, ಸಿಎನ್ಎನ್ ನ್ಯೂಸ್ 18, ಆಜ್ ತಕ್ ಮತ್ತು ನ್ಯೂಸ್ ಮಿನಿಟ್ ಮಹಿಳಾ ಪತ್ರಕರ್ತೆಯರ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಅಲ್ಲದೆ ಅವರು ಪ್ರಯಾಣಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಯ್ಯಪ್ಪ, ಅಯ್ಯಪ್ಪ ಎಂದು ಘೋಷಣೆ ಕೂಗುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರತಿಭಟನಾಕಾರರು ಹಲವು ಮಹಿಳೆಯರ ಮತ್ತು ಪತ್ರಕರ್ತೆಯರ ಮೇಲೆ ದಾಳಿ ನಡೆಸಿದ್ದು, ವಾಹನಗಳನ್ನು ಧ್ವಂಸಗೊಳಿಸಿದ್ದಾರೆ.
ನಿಳಕ್ಕಲ್ ಶಬರಿಮಲೆಯಿಂದ 20 ಕಿ.ಮೀ. ದೂರದಲ್ಲಿದ್ದು, ಪಂಪಾ ನದಿ ತಲುಪಲು ಇದೊಂದೇ ಮಾರ್ಗ. ಹೀಗಾಗಿ ಪ್ರತಿಭಟನಾಕಾರರು ಇಲ್ಲಿ ಜಮಾಯಿಸಿ ಮಹಿಳೆಯರು ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ತಡೆಯುತ್ತಿದ್ದಾರೆ.
ಕಳೆದ ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿದ್ದು, ತೀರ್ಪು ಪ್ರಕಟವಾದ ನಂತರ ಇಂದು ಮೊದಲ ಬಾರಿಗೆ ಅಯ್ಯಪ್ಪಸ್ವಾಮಿ ದೇಗುಲದ ಬಾಗಿಲು ತೆರೆಯಲಾಗಿದೆ. ಇದೇ ಕಾರಣಕ್ಕೆ ಮಹಿಳೆಯರ ಪ್ರವೇಶಕ್ಕೆ ಅಯ್ಯಪ್ಪ ಸ್ವಾಮಿ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮಾತ್ರ ಸುಪ್ರೀಂಕೋರ್ಟ್ ತೀರ್ಪು ಪಾಲನೆಗೆ ರಾಜ್ಯಸರ್ಕಾರ ಬದ್ಧವಾಗಿದ್ದು, ದೇಗುಲ ಪ್ರವೇಶ ಮಾಡುವವರಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
No Comments

Leave A Comment