Log In
BREAKING NEWS >
ಮೇ 29ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ....ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್....

ಪೂರ್ವ ಕರಾವಳಿಯಲ್ಲಿ ಗಜ ಚಂಡಮಾರುತ ಅಬ್ಬರ, ಬೆಂಗಳೂರಲ್ಲೂ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗಜ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಪೂರ್ವ ಕರಾವಳಿಗೆ ಅಪ್ಪಳಿಸಲಿದ್ದು, ಇದರ ಪರಿಣಾಮ ತಮಿಳುನಾಡಜು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ.

ಆದರೆ ತಮಿಳುನಾಡು ಗಡಿದಾಟುತ್ತಿದ್ದಂತೆಯೇ ಗಜ ಚಂಡಮಾರುತದ ಪ್ರಭಾವ ಕೊಂಚ ತಗ್ಗಿದೆ. ಚಂಡಮಾರುತದ ವೇಗ ಕಡಿಮೆಯಾಗಿದೆಯಾದರೂ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್ 1ರ ಹೊತ್ತಿಗೆ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.
ದಕ್ಷಿಣ ಕರ್ನಾಟಕದಲ್ಲೂ ಮಳೆ ಸಾಧ್ಯತೆ
ಇನ್ನು ಕೇವಲ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಮಾತ್ರವಲ್ಲದೇ ದಕ್ಷಿಣ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇನ್ನೆರೆಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ, ವಿಪತ್ತು ನಿರ್ವಹಣಾ ಮಂಡಳಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
No Comments

Leave A Comment