Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಬೆಂಗಳೂರು : ತಡರಾತ್ರಿ ಇಬ್ಬರು ರೌಡಿ ಶೀಟರ್‌ಗಳ ಬರ್ಬರ ಹತ್ಯೆ

ಬೆಂಗಳೂರು: ವಿವರ್ಸ್‌ ಕಾಲೋನಿಯಲ್ಲಿ  ಇಬ್ಬರು ರೌಡಿ ಶೀಟರ್‌ಗಳನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಮುರುಗನ್‌ ಮತ್ತು ಪಳನಿ ಹತ್ಯೆಗೀಡಾದ ರೌಡಿ ಶೀಟರ್‌ಗಳಾಗಿದ್ದಾರೆ. ಆಟೋದಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಮಾರಾಕಾಯುಧಗಳಿಂದ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಹಳೇ ವೈಷಮ್ಯವಿದ್ದ ಕಾರಣ ಬಿಟಿಎಸ್‌ ಮಂಜ ಗ್ಯಾಂಗ್‌ನ ಸದಸ್ಯರು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕೋಣನಕುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

No Comments

Leave A Comment