Log In
BREAKING NEWS >
ವಿಶ್ವಯೋಗ ದಿನಾಚರಣೆಯ ಅ೦ಗವಾಗಿ ಶುಕ್ರವಾರದ೦ದು ವಿವಿದೆಡೆಯಲ್ಲಿ ಸ್ಥಳೀಯ ಸ೦ಘ-ಸ೦ಸ್ಥೆಯ ಆಶ್ರಯದಲ್ಲಿ ಯೋಗ ಪ್ರದರ್ಶನ ಕಾರ್ಯಕ್ರಮ ಜರಗಲಿದೆ.....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಕುಳಲಿ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾರೀ ಸ್ಫೋಟ; ನಾಲ್ವರು ಛಿದ್ರ

ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ರುವ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿದ್ದು  ನಾಲ್ವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದುರಂತದಲ್ಲಿ  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಘಟಕ ಛಿದ್ರಗೊಂಡಿದ್ದು, ಭೀಕರ ದೃಶ್ಯಗಳಿಗೆ ಸಾಕ್ಷಿಯಾಗಿದೆ.

ನಾಲ್ವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಎಲ್ಲರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಘಟಕ ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಅವರ ಒಡೆತನಕ್ಕೆ ಸೇರಿದ್ದಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು  ಸ್ಫೋಟದ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಮುಧೋಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

No Comments

Leave A Comment