Log In
BREAKING NEWS >
ಇ೦ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರ 123ನೇ ಪ್ರತಿಷ್ಠಾ ವರ್ಧ೦ತೋತ್ಸವ-ಪ೦ಚಾಮೃತ ಅಭಿಷೇಕ-ಶತಕಲಾಭಿಷೇಕ-ಮಹಾಪೂಜೆ-ಮಹಾ ಸಮಾರಾಧನೆಯೊ೦ದಿಗೆ ರಾತ್ರಿ ಪೇಟೆ ಉತ್ಸವ ಕಾರ್ಯಕ್ರಮ... ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ

ಕೆಜಿಎಫ್, ದಿ ವಿಲನ್ ಚಿತ್ರ ನಿರ್ಮಾಪಕರಿಗೆ ಐಟಿ ಶಾಕ್: ಶಿವಣ್ಣ, ಪುನೀತ್, ಸುದೀಪ್, ಯಶ್ ಮನೆ ಮೇಲೂ ದಾಳಿ!

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಸ್ಯಾಂಡಲ್‌ವುಡ್‌ನ‌ ಕೆಲ ದಿಗ್ಗಜರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 25 ಕಡೆ ಏಕ ಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ನಾಲ್ವರು ನಟರು ಹಾಗೂ ನಾಲ್ವರು ನಿರ್ಮಾಪಕರ ಮನೆ ಹಾಗೂ ದಾಳಿ ನಡೆಸಿ, ಆಸ್ತಿ ಪತ್ರಗಳು ಹಾಗೂ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಮೊದಲ ಬಾರಿಗೆ ಅತಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವ ಐಟಿ ದಾಳಿ ಇದಾಗಿದೆ.

ಜೆ.ಪಿ ನಗರದಲ್ಲಿರುವ ನಟ ಸುದೀಪ್ ಮನೆ, ಸದಾಶಿವ ನಗರದಲ್ಲಿರುವ ಶಿವರಾಜ್ ಕುಮಾರ್ ಹಾಗೂ ಪುನೀತ್ ಮನೆ, ಕತ್ರಿಗುಪ್ಪೆಯಲ್ಲಿರುವ ನಟ ಯಶ್ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.

ಇನ್ನೂ ನಟರಾದ ಪುನೀತ್ ಮತ್ತು ಶಿವಣ್ಣ ಅವರ ಮನೆಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದು ಸಿಆರ್ ಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ.

No Comments

Leave A Comment