Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಶಬರಿಮಲೆಗೆ ಸ್ತ್ರೀ ಪ್ರವೇಶದ ಬಳಿಕ ಹಿಂಸಾಚಾರ; 1 ಬಲಿ, ಹರತಾಳ

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಬುಧವಾರ ಬೆಳಗಿನ ಜಾವ ಇಬ್ಬರು ಮಹಿಳೆಯರು ಪ್ರವೇಶ ಮಾಡಿದ ಬಳಿಕ ಕೇರಳದೆಲ್ಲೆಡೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ವ್ಯಾಪಕ ಹಿಂಸಾಚಾರ ನಡೆದಿದ್ದು ಈಗಾಗಲೇ ಒಂದು ಬಲಿ ಪಡೆದಿದೆ.

ಪಂದಾಲಂನಲ್ಲಿ ಸಿಪಿಐಎಂ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ವೇಳೆ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ 55 ವರ್ಷದ ಶಬರಿ ಮಲೆ ಕರ್ಮ ಸಮಿತಿಯ ಸದಸ್ಯರೊಬ್ಬರು ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಹಿಂಸಾಚಾರದ ಹಿನ್ನಲೆಯಲ್ಲಿ ಕರ್ನಾಟಕದಿಂದ ಕೇರಳಕ್ಕೆ ಸಂಚರಿಸಬೇಕಾಗಿದ್ದ ಎಲ್ಲಾ ಸರಕಾರಿ ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ.

ವಿವಿಧ ಕೇರಳ ವಿಶ್ವವಿದ್ಯಾಲಯಗಳು ಗುರುವಾರ ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ಮುಂದೂಡಿವೆ.

ಶಬರಿ ಮಲೆ ಕರ್ಮ ಸಮಿತಿ ಕರೆ ನೀಡಿರುವ ರಾಜ್ಯ ಬಂದ್‌ಗೆ ಬಿಜೆಪಿ  ಸಂಪೂರ್ಣ ಬೆಂಬಲ ಸೂಚಸಿದ್ದು,ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಕರಾಳ ದಿನವನ್ನು ಆಚರಿಸುತ್ತಿದೆ.

No Comments

Leave A Comment