Log In
BREAKING NEWS >
ಇ೦ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರ 123ನೇ ಪ್ರತಿಷ್ಠಾ ವರ್ಧ೦ತೋತ್ಸವ-ಪ೦ಚಾಮೃತ ಅಭಿಷೇಕ-ಶತಕಲಾಭಿಷೇಕ-ಮಹಾಪೂಜೆ-ಮಹಾ ಸಮಾರಾಧನೆಯೊ೦ದಿಗೆ ರಾತ್ರಿ ಪೇಟೆ ಉತ್ಸವ ಕಾರ್ಯಕ್ರಮ... ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ

ಜ.31ರಿಂದ ಸಂಸತ್ ಅಧಿವೇಶನ: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಬಜೆಟ್ ಮಂಡನೆ ಕುರಿತ ನಿರ್ಣಯವನ್ನು ಸಂಸದೀಯ ವ್ಯವಹಾರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ಜನವರಿ 31 ರಿಂದ ಫೆಬ್ರವರಿ 13ರವರೆಗೆ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ. ಫೆಬ್ರವರಿ 1 ರಂದು ಜೇಟ್ಲಿಯವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ.

ಅರುಣ್ ಜೇಟ್ಲಿಯವರು ಮಂಡನೆ ಮಾಡುತ್ತಿರುವ 6ನೇ ಬಜೆಟ್ ಇದಾಗಿದ್ದು, ಲೋಕಸಭಾ ಚುನಾವಣೆ ಹತ್ತಿರ ಇರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಭಾರೀ ನಿರೀಕ್ಷೆಗಳನ್ನು ಮೂಡಿಸಿದೆ.

ಹಣಕಾಸು ಸಚಿವಾಲಯ ಬಜೆಟ್ ಭಾಷಣಕ್ಕಾಗಿ ಈಗಾಗಲೇ ವಿವಿಧ ಸಚಿವಾಲಯಗಳಿಂದ ಅಭಿಪ್ರಾಯಗಳನ್ನು ಪಡೆದುಕೊಂಡಿದೆ.

No Comments

Leave A Comment