Log In
BREAKING NEWS >
ಇ೦ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರ 123ನೇ ಪ್ರತಿಷ್ಠಾ ವರ್ಧ೦ತೋತ್ಸವ-ಪ೦ಚಾಮೃತ ಅಭಿಷೇಕ-ಶತಕಲಾಭಿಷೇಕ-ಮಹಾಪೂಜೆ-ಮಹಾ ಸಮಾರಾಧನೆಯೊ೦ದಿಗೆ ರಾತ್ರಿ ಪೇಟೆ ಉತ್ಸವ ಕಾರ್ಯಕ್ರಮ... ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಸ೦ತಮಾಸದ ಪ್ರಯುಕ್ತ ಮೇ 23ರ೦ದು ಸಗ್ರಿ ನಾಯಕ್ ಕುಟು೦ಬಸ್ಥರಿ೦ದ ವಸ೦ತಪೂಜಾ ಸೇವೆಯು ಜರಗಲಿದೆ

ಕುಂಭಮೇಳ; ದಿಗಂಬರ ಅಖಾಡ ಟೆಂಟ್ ನಲ್ಲಿ ಸಿಲಿಂಡರ್ ಸ್ಫೋಟ, ಬೆಂಕಿ ಅವಘಡ!

ಉತ್ತರಪ್ರದೇಶ: ವಿಶ್ವದ ಅತೀ ದೊಡ್ಡ ಧಾರ್ಮಿಕ ಸಮ್ಮೇಳನವಾದ ಪ್ರಯಾಗ್ ರಾಜ್ ನ ಕುಂಭಮೇಳದ ದಿಗಂಬರ ಅಖಾಡದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ನಡೆದಿದೆ. ಆದರೆ ಘಟನೆಯಲ್ಲಿ ಯಾರೊಬ್ಬರಿಗೂ ಗಾಯವಾಗಿಲ್ಲ ಎಂದು ವರದಿ ತಿಳಿಸಿದೆ.

ಬೆಂಕಿ ಹೊತ್ತಿಕೊಂಡಿರುವ ಸುದ್ದಿ ಹರಡುತ್ತಿದ್ದಂತೆಯೇ ಜನರಲ್ಲಿ ಆತಂಕ ಮೂಡಿಸಿತ್ತು. ಯಾವುದೇ ಕಾಲ್ತುಳಿತವಾಗಲಿ, ಸಾವು, ನೋವು ಸಂಭವಿಸಿಲ್ಲ. ಸ್ಥಳಕ್ಕೆ ಭದ್ರತಾ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದರು. ಸ್ಥಳೀಯ ವರದಿ ಪ್ರಕಾರ, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿರುವುದಾಗಿ ವಿವರಿಸಿದೆ.

No Comments

Leave A Comment