Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ರಿಪಬ್ಲಿಕ್ ಡೇ ಟಾರ್ಗೆಟ್; ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

ಶ್ರೀನಗರ: ಶ್ರೀನಗರದಲ್ಲಿ ಆಚರಿಸುತ್ತಿದ್ದ ಗಣರಾಜ್ಯೋತ್ಸವ ಸಂಭ್ರಮವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಂಚು ಹೂಡಿದ್ದ ಜೈಶ್ ಎ ಮೊಹಮ್ಮದ್(ಜೆಇಎಂ) ಉಗ್ರಗಾಮಿ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿರುವ ಘಟನೆ ಶನಿವಾರ ಶ್ರೀನಗರ ಜಿಲ್ಲೆಯ ಹೊರವಲಯದ ಖೋನ್ ಮೋಹ್ ಪ್ರದೇಶದಲ್ಲಿ ನಡೆದಿದೆ.

ಇಬ್ಬರ ಬಳಿ ಇದ್ದ ಎಕೆ 47 ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಿರುವುದಾಗಿ ಮಿಲಿಟರಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ರಾಷ್ಟ್ರೀಯ ರೈಫಲ್ಸ್ ನ ಸಿಬ್ಬಂದಿಗಳು, ವಿಶೇಷ ಕಾರ್ಯಾಚರಣೆ ಪಡೆ(ಎಸ್ ಓಜಿ) ಹಾಗೂ ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಸಿಬ್ಬಂದಿಗಳು ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

No Comments

Leave A Comment