Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ಉಡುಪಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ…

ಉಡುಪಿಯ ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಶನಿವಾರ ನಡೆದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋಥ್ಸವದ ಸಂದೇಶ ನೀಡಿದರು.

ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ 6 ಮಂದಿ ಸರಕಾರಿ ನೌಕರರಿಗೆ, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ 17 ಕ್ರೀಡಾಪಟುಗಳಿಗೆ, ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಉತ್ತಮ ರೀತಿಯ ಕಾರ್ಯ ನಿರ್ವಹಿಸಿದ ಅಗ್ನಿಶಾಮಕ ಇಲಾಖೆಯ 15 ಜನ ಅಧಿಕಾರಿ/ಸಿಬ್ಬಂದಿಗಳಿಗೆ ಮತ್ತು ಪಥ ಸಂಚಲನದಲ್ಲಿ ಭಾಗವಹಿಸಿದ ತಂಡಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಪೊಲೀಸ್, ಅಗ್ನಿಶಾಮಕ, ಹೃಹ ರಕ್ಷಕದಳ ಮತ್ತು ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ ನಿಂಬರಗಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಎಸ್ಪಿ ಕುಮಾರ ಚಂದ್ರ, ನಗರಸಭೆ ಆಯುಕ್ತ ಆನಂದ್ ಸಿ ಕಲ್ಲೋಳಿಕರ್, ನಿವೃತ್ತ ಹಿರಿಯ ಪತ್ರಕರ್ತ ಆನಂದ ಅಮ್ಮೆಂಬಳ ಉಪಸ್ಥಿತರಿದ್ದರು.

No Comments

Leave A Comment