Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ರಾಜ್ಯ ಸರ್ಕಾರ ಅಲುಗಾಡಿಸುವಲ್ಲಿ ಮೋದಿ ಪಾತ್ರವಿಲ್ಲ;ಮಾಜಿ ಪ್ರಧಾನಿ HDD

ಬೆಂಗಳೂರು; ರಾಜ್ಯದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಲುಗಾಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಇದೆ ಅಂತ ನನಗೆ ಅನ್ನಿಸೋದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೋಮವಾರ ಬಿಜೆಪಿಯ ಆಪರೇಶನ್ ಕಮಲದ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇವಲ ಮೂರು ದಿನಕ್ಕೆ ಮುಖ್ಯಮಂತ್ರಿಯಾಗಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಅಸಮಧಾನವಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಂದಲೇ ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೆಡವಲು ಪ್ರಧಾನಿ ಮೋದಿ ಅವರ ಪಾತ್ರ ಇದೆ ಅಂತ ನನಗೆ ಅನ್ನಿಸುತ್ತಿಲ್ಲ. ಇದೆಲ್ಲಾ ರಾಜ್ಯ ನಾಯಕರೇ ಸಂಚು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೃದು ಧೋರಣೆ ವ್ಯಕ್ತಪಡಿಸಿದ್ದಾರೆ. ಫೆಬ್ರುವರಿ 8ಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡಿಸಲು ದಿನಾಂಕ ನಿಗದಿಯಾಗಿದೆ.

ಏತನ್ಮಧ್ಯೆ ಬಜೆಟ್ ಮಂಡನೆ ಮಂಡಿಸುವ ದಿನ ಅಥವಾ ಅದಕ್ಕೂ ಮುನ್ನವೇ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಊಹಾಪೋಹ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಈ ಪ್ರತಿಕ್ರಿಯೆ ನೀಡಿದ್ದಾರೆ.

No Comments

Leave A Comment