Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಮೋದಿ vs ದೀದಿ: ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಸತ್ಯಾಗ್ರಹ – ಮಮತಾ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ದೌರ್ಜನ್ಯಗಳ ವಿರುದ್ಧ ಸತ್ಯಾಗ್ರಹ ನಡೆಸುತ್ತಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

ಸಿಬಿಐ ವಿರುದ್ಧ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಗೆ ಇಂದು ಎರಡನೇ ದಿನಕ್ಕೆ ಕಾಲಿಟಿದ್ದು, ನಮ್ಯ ಸತ್ಯಾಗ್ರಹ ಯಾವುದೇ ತನಿಖಾ ಸಂಸ್ಥೆಯ ವಿರುದ್ಧ ಅಲ್ಲ. ಮೋದಿ ಸರ್ಕಾರದ ದೌರ್ಜನ್ಯಗಳ ವಿರುದ್ಧ ನಮ್ಮ ಹೋರಾಟ ಎಂದು ದೀದಿ ಹೇಳಿದ್ದಾರೆ.

 

 

ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತಾ ಶಾ ಅವರು ಪಶ್ಚಿಮ ಬಂಗಾಳ ಆಡಳಿತದ ಮೇಲೆ ದಾಳಿ ನಡೆಸುತ್ತಿದ್ದು, ಸಮಸ್ಯೆ ಪರಿಹಾರಗೊಳ್ಳುವವರೆಗೆ ತಾನು ಧರಣಿ ಮುಂದುವರೆಸುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸಿಬಿಐ ಹಾಗೂ ಬ್ಯಾನರ್ಜಿ ಸರ್ಕಾರದ ನಡುವಿನ ಜಟಾಪಟಿ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು, ಟಿಎಂಸಿ ಸದಸ್ಯರು ಬಿಜೆಪಿ ಹಟಾವೋ ಎಂದು ಘೋಷಣೆ ಕೂಗಿದರು.

ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು ಮುಂದಾದ ಸಿಬಿಐ ಕ್ರಮವನ್ನು ಖಂಡಿಸಿ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಪ್ರತಿಭಟನೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅತ್ತ ಕೋಲ್ಕತಾದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಆಹೋರಾತ್ರಿ ಧರಣಿ ಆರಂಭಿಸುತ್ತಿದ್ದಂತೆಯೇ ಇತ್ತ ಟ್ವಿಟರ್ ನಲ್ಲಿ ಪ್ರತಿಪಕ್ಷ ನಾಯಕರು ಸರಣಿ ಟ್ವೀಟ್  ಗಳನ್ನು ಮಾಡುವ ಮೂಲಕ ದೀದಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಅಲ್ಲದೆ ಹಲವು ರಾಜಕೀಯ ನಾಯಕರು ತಾವೂ ಕೂಡ ಕೋಲ್ಕತಾಗೆ ತೆರಳಿ ಧರಣಿಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.

No Comments

Leave A Comment