Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ರಫೇಲ್ ಒಪ್ಪಂದ UPA ಅವಧಿಗಿಂತ ಶೇ.2.8ರಷ್ಟು ಅಗ್ಗ; CAG ವರದಿ ಬಹಿರಂಗ

ನವದೆಹಲಿ: ಫ್ರಾನ್ಸ್ ನಿರ್ಮಿತ ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದಿನ ಯುಪಿಎ ಸರ್ಕಾರದಲ್ಲಿ ನಡೆದ ಒಪ್ಪಂದಕ್ಕಿಂತ ಶೇ.2.8ರಷ್ಟು ಕಡಿಮೆ ಮೌಲ್ಯದಲ್ಲಿ ಖರೀದಿಸಿದೆ ಎಂದು ಸಿಎಜಿ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ.

ಲೋಕಸಭೆಯ ಅಧಿವೇಶನ ಮುಕ್ತಾಯಕ್ಕೂ ಮುನ್ನ ಬುಧವಾರ ಮೋದಿ ಸರ್ಕಾರ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸಿಎಜಿ ವರದಿಯನ್ನು ಮಂಡಿಸಿದೆ. ಈ ಮೂಲಕ ರಫೇಲ್ ಡೀಲ್ ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸುತ್ತಲೇ ಬಂದಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

No Comments

Leave A Comment