Log In
BREAKING NEWS >
ಸೆ.22ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಕೋಟಿತುಳಸಿ ಅರ್ಚನೆ ಕಾರ್ಯಕ್ರಮ ಜರಗಲಿದೆ...

80 ಅಡಿ ಕಂದಕಕ್ಕೆ ಉರುಳಿದ ಕಾರು; ಸುಳ್ಯ ಮೂಲದ ನಾಲ್ವರ ದುರ್ಮರಣ

ಚಿಕ್ಕಮಗಳೂರು: ಇಲ್ಲಿನ ಮೂಡಿಗೆರೆ ತಾಲೂಕಿನ ಹಿರೇಬೈಲು ಗ್ರಾಮದ ಸಮೀಪ 80 ಅಡಿ ಕಂದಕಕ್ಕೆ ಕಾರೊಂದು ಉರುಳಿಬಿದ್ದು ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟು ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಕಳಸದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಎಂದು ತಿಳಿಸು ಬಂದಿದೆ.

ಕಾರಿನಲ್ಲಿದ್ದವರನ್ನು ಸುಳ್ಯ ಮೂಲದವರೆಂದು ಗುರುತಿಸಲಾಗಿದ್ದು, ಇವರೆಲ್ಲರೂ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿರುವುದಾಗಿ ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

No Comments

Leave A Comment