Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಸಿ.ಟಿ. ರವಿ ಪ್ರಯಾಣಿಸುತ್ತಿದ್ದ ಕಾರು ಢಿಕ್ಕಿಯಾಗಿ ಇಬ್ಬರು ಸಾವು

ತುಮಕೂರು: ಇಲ್ಲಿನ ಕುಣಿಗಲ್ ತಾಲೂಕಿನ ಊರ್ಕೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿ.ಜೆ.ಪಿ. ಶಾಸಕ ಸಿ.ಟಿ. ರವಿ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಶಶಿಕುಮಾರ್ ಮತ್ತು ಸುನಿಲ್ ಗೌಡ ಎಂದು ಗುರುತಿಸಲಾಗಿದೆ. ಇನ್ನೊಬ್ಬರಿಗೆ ತೀವ್ರ ಸ್ವರೂಪದ ಮೂಳೆ ಮುರಿತ ಉಂಟಾಗಿದೆ. ಎರಡು ಕಾರುಗಳಲ್ಲಿ 13 ಜನ ಗೆಳೆಯರು ಪ್ರವಾಸಕ್ಕೆಂದು ಹೋಗಿದ್ದರು. ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಹೆದ್ದಾರಿ ಸಮೀಪ ತಮ್ಮ ಕಾರುಗಳನ್ನು ನಿಲ್ಲಿಸಿ ರಸ್ತೆಬದಿಯಲ್ಲಿ ನಿಂತಿದ್ದ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಶಾಸಕ ಸಿ.ಟಿ.ರವಿ ಅವರ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಅಪ್ಪಳಿಸಿತು. ಈ ಸಂದರ್ಭದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ನಡೆದ ತಕ್ಷಣ ಆಘಾತಕ್ಕೊಳಗಾದ ಶಾಸಕ ರವಿ ಅವರು ಸ್ವಲ್ಪ ಹೊತ್ತು ಘಟನಾ ಸ್ಥಳದಲ್ಲಿದ್ದರು ಬಳಿಕ ಬೆಂಗಳೂರಿಗೆ ಬಂದು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಳಿಕ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಾಸಕರ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಸಿ ಟಿ ರವಿ ವಿರುದ್ಧ ದೂರು ದಾಖಲು
ಕುಣಿಗಲ್ ತಾಲೂಕಿನ ಹೆದ್ದಾರಿಯಲ್ಲಿ ಅಪಘಾತಕ್ಕೆ ಕಾರಣವಾಗಿ ಇಬ್ಬರ ಸಾವಿಗೆ ಕಾರಣರಾದ ಚಿಕ್ಕಮಗಳೂರು ಶಾಸಕ ಸಿ ಟಿ ರವಿ ವಿರುದ್ಧ ತುಮಕೂರು ಜಿಲ್ಲೆಯ ಕುಣಿಗಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐಪಿಸಿ ಸೆಕ್ಷನ್ 279, 337, 304 (ಎ) ಅಡಿಯಲ್ಲಿ ಶಾಸಕ ರವಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment