Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಢಾಕಾ ಕೆಮಿಕಲ್ ಗೋದಾಮಿಗೆ ಬೆಂಕಿ: 69 ಬಲಿ, ಹಲವರು ಗಂಭೀರ

ಢಾಕಾ : ಭೀಕರ ಬೆಂಕಿ ಅವಘಡಕ್ಕೆ 69 ಜನರು ಬಲಿಯಾದ ಘಟನೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಬುಧವಾರ ರಾತ್ರಿ ನಡೆದಿದೆ. ಕೆಮಿಕಲ್ ಗೊದಾಮು, ಪ್ಲಾಸ್ಟಿಕ್ ಗೋದಾಮು ಸೇರಿದಂತೆ ಹಲವು ಕಟ್ಟಡಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಹಳೇ ಢಾಕಾದ ಚೌಕ್ ಬಾಜಾರ್ ಎಂಬ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಹಾಜೀ ವಾಹೀದ್ ಮ್ಯಾನ್ಶನ್‌ ಎಂಬ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ನಡೆದು ನಾಲ್ಕು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.

ಹಾಜೀ ವಾಹೀದ್ ಮ್ಯಾನ್ಶನ್‌ ನ ಕೆಳ ಮಹಡಿಯಲ್ಲಿರುವ ರಾಸಾಯನಿಕ ಗೋದಾಮಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕಟ್ಟಡದ ಇತರ ಮಹಡಿಗಳಿಗೆ ಮತ್ತು ಸಮೀಪದ ಕಟ್ಟಡಗಳಿಗೂ ಬೆಂಕಿಯ ಕೆನ್ನಾಲಿಗೆ ಚಾಚಿದೆ.

ಸುಮಾರು 69 ಜನರು ಈ ದುರ್ಘಟನೆ ಗೆ ಬಲಿಯಾಗಿದ್ದು, ಮೃತರ ಸಂಖ್ಯೆ ಹೆಚ್ಚುವ ಸಂಭವವಿದೆ ಎನ್ನಲಾಗಿದೆ. ಕಟ್ಟಡದಲ್ಲಿ ಇನ್ನೂ ಹಲವು ಜನರು ಸಿಲುಕಿರುವ ಸಾಧ್ಯತೆಯಿದ್ದು, ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಮತ್ತು ಅಪಾಯದಲ್ಲಿ ಸಿಲುಕಿರುವ ರಕ್ಷಣೆಗೆ ಹರಸಾಹಸ ಪಡುತ್ತಿದ್ದಾರೆ .

No Comments

Leave A Comment