Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 22 ರಿ೦ದ ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಏರ್‌ ಶೋ; 277 ಕಾರು ಭಸ್ಮವಾಗಲು ಓವರ್‌ ಹೀಟೆಡ್‌ ಸೈಲೆನ್ಸರ್‌ ಕಾರಣವೇ?

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಶನಿವಾರ ಏರ್‌ಶೋ ವೇಳೆ  ಪಾರ್ಕಿಂಗ್‌ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ 277 ಕಾರುಗಳು ಭಸ್ಮವಾಗಲು ನಿಖರವಾದ ಕಾರಣ ಇದುವರೆಗೆ ತಿಳಿದು ಬಂದಿಲ್ಲ, ಆದರೆ ಅತೀಯಾಗಿ ಬಿಸಿಯಾಗಿದ್ದ  ಕಾರೊಂದರ ಸೈಲೆನ್ಸರ್‌ ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿದೆ ಎನ್ನಲಾಗಿದೆ. ಈ ಬಗ್ಗೆ  ಭಾನುವಾರ ಅಧಿಕಾರಿಗಳು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ  ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ನಿರ್ಮಲಾ ಸೀತಾರಾಮನ್‌ ಅವರು ಭೀಕರ ಅಗ್ನಿ ಅವಘಡ ನಡೆದ ಸ್ಥಳ ಪರಿಶೀಲನೆ ನಡೆಸಿ ಅವಶೇಷಗಳನ್ನು ವೀಕ್ಷಿಸಿದರು. ಈ ವೇಳೆ ವಾಯುಪಡೆಯ ಅಧಿಕಾರಿಗಳು, ಅಗ್ನಿ ಶಾಮಕ ದಳದ ಅಧಿಕಾರಿಗಳು, ವಿಕೋಪ ನಿರ್ವಹಣಾ ತಂಡ ಸಚಿವರಿಗೆ ಘಟನೆಯ ಕುರಿತು ವಿವರಿಸಿದರು.

ಶನಿವಾರ ಪಾರ್ಕಿಂಗ್‌ ಸ್ಥಳದಲ್ಲಿ ಬೆಂಕಿ ವ್ಯಾಪಿಸಿ 277 ಕಾರುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದವು.

No Comments

Leave A Comment