Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ಪಾಕ್ ಗೆ “ಕೈ” ಕೊಟ್ಟ ಚೀನಾ, ರಷ್ಯಾ; ಭಾರತಕ್ಕೆ ರಾಜತಾಂತ್ರಿಕ ಗೆಲುವು

ಬೀಜಿಂಗ್/ಮಾಸ್ಕೋ: ಭಾರತೀಯ ಸೇನಾ ಪಡೆ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಪಾಕಿಸ್ತಾನದೊಳಕ್ಕೆ ತೆರಳಿ ವಾಯುಪಡೆಯ ಮಿರಾಜ್ 2000 ವಿಮಾನ ಬಾಂಬ್ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗತೊಡಗಿದ್ದು, ಮತ್ತೊಂದೆಡೆ ಯಾವುದೇ ಕಾರಣಕ್ಕೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡಬೇಡಿ ಎಂದು ಚೀನಾ ಮತ್ತು ರಷ್ಯಾ ಜಂಟಿ ಪ್ರಕಟಣೆಯಲ್ಲಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

ಪಾಕಿಸ್ತಾನದ ವಿರುದ್ಧ ಚೀನಾ ಮತ್ತು ರಷ್ಯಾ ಜಂಟಿ ಹೇಳಿಕೆ ನೀಡಿದ್ದು, ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಚೀನಾ ತಿಳಿಸಿದ್ದು, ಇದರಿಂದಾಗಿ ಪಾಕಿಸ್ತಾನ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ಅಲ್ಲದೇ ಚೀನಾ, ರಷ್ಯಾ ಹೇಳಿಕೆಯಿಂದ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಂತಾಗಿದೆ.

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಯಾವ ಉಗ್ರಗಾಮಿ ಸಂಘಟನೆಗೂ ಬೆಂಬಲ ನೀಡಬಾರದು ಎಂದು ಪಾಕಿಸ್ತಾನಕ್ಕೆ ಉಭಯ ದೇಶಗಳೂ ಎಚ್ಚರಿಕೆ ನೀಡಿವೆ.

ಭಾರತೀಯ ವಾಯುಪಡೆ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದ ನಂತರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಚೀನಾಕ್ಕೆ ಭೇಟಿ ನೀಡಿ, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ಬೆಂಬಲ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದರು.

No Comments

Leave A Comment