Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....

ಜಮ್ಮು ಕಾಶ್ಮೀರ: ಬಸ್ಸು ಪ್ರಪಾತಕ್ಕೆ ಉರುಳಿ 6 ಸಾವು, 38 ಮಂದಿಗೆ ಗಾಯ

ಶ್ರೀನಗರ : ಜಮ್ಮು ಕಾಶ್ಮೀರದ ಸುರಿನ್‌ಸಾರ್‌ ನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದ ಬಸ್ಸು ಪ್ರಪಾತಕ್ಕೆ ಉರುಳಿ ಬಿದ್ದ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟ ಇತರ 38 ಮಂದಿ ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.

ಜಮ್ಮು ಕಾಶ್ಮೀರದ ಉಧಾಂಪುರದಲ್ಲಿ ಮಜಾಲ್ತಾ ಎಂಬಲ್ಲಿ ನಿನ್ನೆ ಶುಕ್ರವಾರ ಮಧ್ಯರಾತ್ರಿಯ ವೇಳೆಗೆ ಪ್ರಪಾತಕ್ಕೆ ಬಸ್ಸು  ಉರುಳಿ  ಬಿತ್ತು ಎಂದು ವರದಿಗಳು ತಿಳಿಸಿವೆ.

ದುರಂತ ನಡೆದ ತಾಣದಲ್ಲೀಗ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.

No Comments

Leave A Comment