Log In
BREAKING NEWS >
ಸೆ.22ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಕೋಟಿತುಳಸಿ ಅರ್ಚನೆ ಕಾರ್ಯಕ್ರಮ ಜರಗಲಿದೆ...

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಮಗು ಸೇರಿ ನಾಲ್ವರ ದುರ್ಮರಣ

ಸಕಲೇಶಪುರ: ಸರಕಾರಿ ಬಸ್ ಹಾಗು ಕಾರಿನ ನಡುವೆ ರವಿವಾರ ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಹಾಸನದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹಗಳು ರಸ್ತೆಗೆ ಎಸೆಯಲ್ಪಟ್ಟಿದ್ದವು.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹಾಸನ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ.


ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಿರಿಯ ಪೊಲೀಸ್ ಆಧಿಕಾತಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

No Comments

Leave A Comment