Log In
BREAKING NEWS >
ಕೊರ೦ಗ್ರಪಾಡಿಯಲ್ಲಿ ರಿಕ್ಷಾ ಬಸ್ ಡಿಕ್ಕಿ-ಶಾಲಾ ಮಗು ಮತ್ತು ಚಾಲಕ ಗ೦ಭೀರ....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಮಕ್ಕಳ ಭವಿಷ್ಯ ಕಾಪಾಡಲು ಪೋಲಿಯೋ ಹಾಕಿಸಿ- ಡಾ. ಜಯಮಾಲಾ

ಉಡುಪಿ: ಮಕ್ಕಳ ಭವಿಷ್ಯ ಆರೋಗ್ಯಕರವಾಗಿರುವ ದೃಷ್ಠಿಯಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.
ಅವರು ಭಾನುವಾರ, ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿ ಮಾತನಾಡಿದರು.

ಪೋಲಿಯೋ ಲಸಿಕೆ ಮಕ್ಕಳ ಬದುಕಿಗೆ ಅಮೃತಬಿಂದು ಇದ್ದ ಹಾಗೆ, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹಾಕಿಸಿ ಅವರ ಭವಿಷ್ಯವನ್ನು ಭದ್ರಗೊಳಿಸಬೇಕು , ಉಡುಪಿ ಜಿಲ್ಲೆಯಲ್ಲಿ 77740 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಇದ್ದು, ನಾಳೆಯಿಂದ 3 ದಿನಗಳ ಕಾಲ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಬಿಟ್ಟುಹೋದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ ಎಂದು ಡಾ. ಜಯಮಾಲಾ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಡಿಹೆಚ್ಓ ಡಾ. ಓಂ ಪ್ರಕಾಶ್ ಕಟ್ಟೀಮನಿ, ಜಿಲ್ಲಾ ಸರ್ಜನ್ ಡಾ. ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಪಲ್ಸ್ ಪೋಲಿಯೋ ನೋಡೆಲ್ ಅಧಿಕಾರಿ ಡಾ. ಶೀನಪ್ಪ, ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ.ರಾಮ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಶಿಖಾ , ರೋಟರಿ ಕ್ಲಬ್ ನ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

No Comments

Leave A Comment