Log In
BREAKING NEWS >
ಕೊರ೦ಗ್ರಪಾಡಿಯಲ್ಲಿ ರಿಕ್ಷಾ ಬಸ್ ಡಿಕ್ಕಿ-ಶಾಲಾ ಮಗು ಮತ್ತು ಚಾಲಕ ಗ೦ಭೀರ....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಮೂವರು ಜೀವಂತ ದಹನ

ನವದೆಹಲಿ:ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿಹೊತ್ತಿಕೊಂಡ ಪರಿಣಾಮ ತಾಯಿ ಹಾಗೂ ಇಬ್ಬರು ಮಕ್ಕಳು ಜೀವಂತವಾಗಿ ಸುಟ್ಟು ಹೋದ ಘಟನೆ ಭಾನುವಾರ ಪೂರ್ವ ದೆಹಲಿಯ ಅಕ್ಷರ್ ಧಾಮ್ ಫ್ಲೈ ಓವರ್ ನಲ್ಲಿ ನಡೆದಿದೆ. ಏತನ್ಮಧ್ಯೆ ಪತಿ ಹಾಗೂ 3ನೇ ಮಗಳು ಪವಾಡಸದೃಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿನ್ನೆ ಸಂಜೆ 6.30ರ ಸುಮಾರಿಗೆ ಕಾರಿನಲ್ಲಿ ಅಕ್ಷರ್ ಧಾಮ್ ದೇವಸ್ಥಾನಕ್ಕೆ 35 ವರ್ಷದ ಮಹಿಳೆ ಹಾಗೂ ಆಕೆಯ ಇಬ್ಬರು ಹೆಣ್ಣು ಮಕ್ಕಳು ತೆರಳುತ್ತಿದ್ದ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನ ಹಿಂಭಾಗದಲ್ಲಿ (ಸಿಎನ್ ಜಿ) ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ವರದಿ ತಿಳಿಸಿದೆ.

ಬೆಂಕಿ ಕಾರಿನೊಳಗೆ ಆವರಿಸುತ್ತಿದ್ದಂತೆಯೇ ಕಾರನ್ನು ಚಲಾಯಿಸುತ್ತಿದ್ದ ಉಪೇಂದ್ರ ಮಿಶ್ರಾ ಮುಂಭಾಗದಲ್ಲಿ ಕುಳಿತಿದ್ದ ಮಗಳನ್ನು ಹಿಡಿದುಕೊಂಡು ಹೊರಗೆ ಹಾರಿದ್ದರು. ಆದರೆ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ಪತ್ನಿ ರಾಜಾನಾ ಮಿಶ್ರಾ ಹಾಗೂ ಇಬ್ಬರು ಹೆಣ್ಣು ಮಕ್ಕಳು ಹೊರಬರಲು ಸಾಧ್ಯವಾಗದೇ ಸುಟ್ಟು ಕರಕಲಾಗಿ ಹೋಗಿರುವುದಾಗಿ ವರದಿ ವಿವರಿಸಿದೆ.

ಘಟನೆಯಿಂದ ಪತಿ ಆಘಾತಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಸಿಪಿ ಜಸ್ಮೀತ್ ಸಿಂಗ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದರು.

No Comments

Leave A Comment