Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಅಪ್ಪಚ್ಚಿ – ಇಬ್ಬರ ದುರ್ಮರಣ

ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಲಗೇರಿ ಬಡಾವಣೆ ಬಳಿಯ ಬೈಪಾಸ್‍ನಲ್ಲಿ ನಡೆದಿದೆ.

ಈ ಘಟನೆ ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದ್ದು, ಮೃತಪಟ್ಟವರು ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಕಾರಿನಲ್ಲಿ ಒಟ್ಟು ಮೂವರು ಇದ್ದು, ಬೆಳಗಾವಿಯಿಂದ ಹುಬ್ಬಳ್ಳಿ ಹೋಗುತ್ತಿದ್ದರು. ಆದರೆ ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರಿಗೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೊತ್ತೊಬ್ಬರಿಗೆ ಗಂಭೀರವಾಗಿ ಗಾಯವಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರಿನಲ್ಲಿದ್ದ ಒಬ್ಬರನ್ನು ಹೊರ ತೆಗೆಯಲು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment