Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಪಿಪಿಸಿ ಪ್ರಾಂಶುಪಾಲರಾದ ಡಾ. ಬಿ. ಜಗದೀಶ ಶೆಟ್ಟರಿಗೆ ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ


ಉಡುಪಿ ; ಪೂರ್ಣ ಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಕಾಲ ಉಪನ್ಯಾಸಕರಾಗಿ ಬಳಿಕ ನಾಲ್ಕು ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆಗೈದು ನಿವೃತ್ತರಾಗುತ್ತಿರುವ ಡಾ. ಬಿ. ಜಗದೀಶ ಶೆಟ್ಟರನ್ನು ಮಾರ್ಚ್ 30-03-2019 ಶನಿವಾರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಅಭಿನಂದಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ.ಬಿ.ಎಂ ಸೋಮಯಾಜಿ ಈ ಸಮಯದಲ್ಲಿ ಮಾತನಾಡಿ ಡಾ. ಬಿ. ಜಗದೀಶ ಶೆಟ್ಟರ ಅವಧಿಯಲ್ಲಿ ಹಳೆ ವಿದ್ಯಾರ್ಥಿ ಸಂಘ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿದ್ದು, ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಕಾಲೇಜಿನ ಇತಿಹಾಸದಲ್ಲಿ ನಿವೃತ್ತಿಯ ದಿನದಂದು ಹಳೆ ವಿದ್ಯಾರ್ಥಿಗಳು ಅಭಿನಂದಿಸುತ್ತಿರುವುದು ಪ್ರಥಮ ಬಾರಿಯಾಗಿದೆ. ಕಾಲೇಜಿನ ಬೆಳವಣಿಗೆಯಲ್ಲಿ ಜಗದೀಶ ಶೆಟ್ಟರ ಕೊಡುಗೆ ಸ್ಮರಣೀಯವಾಗಿದೆ ಎಂದು ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ ಜಿ ಎಸ್ ಚಂದ್ರಶೇಖರ ನುಡಿದರು.

ಆಡಳಿತ ಮಂಡಳಿಯ ಕೋಶಾಧಿಕಾರಿ ಪ್ರದೀಪ್ ಕುಮಾರ್ ಹಳೆವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ಶ್ರೀಮತಿ ವಿಮಲ ಚಂದ್ರಶೇಖರ, ಮೀನಾಲಕ್ಷಣಿ ಅಡ್ಯಂತಾಯ, ಕಾರ್ಯದರ್ಶಿ ಮುರಳಿ ಕಡೆಕಾರ್, ಸದಸ್ಯರಾದ ನಾಗರಾಜ್ ಹೆಬ್ಬಾರ್, ಮಂಜುನಾಥ, ಮಧುಸೂದನ್ ಪುತ್ರಾಯ, ಈಶ್ವರ ಚಿಟ್ಪಾಡಿ, ಸ್ನೇಹ ಆಚಾರ್ಯ, ಮಂಜುನಾಥ ಕರಬ, ಸೌಮ್ಯ ಶೆಟ್ಟಿ, ಯಶ್ವಂತ್ ಭಟ್ ಹಾಗೂ ಕಾಲೇಜಿನ ಉಪನ್ಯಾಸಕರುಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಂದಿನ ಪ್ರಾಂಶುಪಾಲರಾದ ಡಾ. ಎಸ್.ಎ.ಪಿ ಭಟ್ ಇವರನ್ನು ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.

No Comments

Leave A Comment