Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 26ರ೦ದು ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಬೆಂಗಳೂರು: ಐಟಿ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, 1.35 ಕೋಟಿ ರು. ವಶ!

ಬೆಂಗಳೂರು: ರಾಜಕಾರಣಿಗಳು, ನಟರು ಹಾಗೂ ಗುತ್ತಿಗೆದಾರರಿಗೆ ಶಾಕ್ ನೀಡುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗೇ ಇಂದು ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದು ದಾಳಿ ವೇಳೆ ಬರೋಬ್ಬರಿ 1.35 ಕೋಟಿ ರುಪಾಯಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಬಲೆಗೆ ಬಿದ್ದಿದ್ದ ಐಟಿ ಅಧಿಕಾರಿ ನಾಗೇಶ್ ಅವರ ಮನೆ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 1.35 ಕೋಟಿ ನಗದು, ಮಹತ್ವದ ದಾಖಲೆಗಳು ಹಾಗೂ ಪೆನ್ ಡ್ರೈವ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

 

 

ಕಳೆದ ಮಾರ್ಚ್ ನಲ್ಲಿ ಗುತ್ತಿಗೆದಾರ ಶ್ರೀನಿವಾಸ್​ ಅವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಐಟಿ ಅಧಿಕಾರಿ ನಾಗೇಶ್ ಅವರು ಕೇಸ್ ಖುಲಾಸೆಗೊಳಿಸಲು 40 ಲಕ್ಷ ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಅದರಂತೆ ಇಂದು 14 ಲಕ್ಷ ರುಪಾಯಿ ನಗದು ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಐಟಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟ ಕುರಿತು ಗುತ್ತಿಗೆದಾರ ಶ್ರೀನಿವಾಸ್ ಸ್ನೇಹಿತನ ಸಲಹೆ ಮೇರೆಗೆ ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಅನ್ವಯ ಸ್ಥಳಕ್ಕೆ ಬಂದ ಸಿಬಿಐ ಅಧಿಕಾರಿಗಳು ಹಣ ಪಡೆಯುವ ವೇಳೆಯೇ ನಾಗೇಶ್ ರನ್ನು ವಶಕ್ಕೆ ಪಡೆದಿದ್ದರು.

No Comments

Leave A Comment