Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಧಾರವಾಡ ಆಯ್ತು, ಈಗ ಬೆಂಗಳೂರು ಸರದಿ, ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರ ಸಾವು!

ಬೆಂಗಳೂರು: ಧಾರವಾಡ ಕಟ್ಟಡ ಕುಸಿತ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೂ ಅಂತಹುದೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಬೆಂಗಳೂರಿನ ಯಶವಂತಪುರದ ಆರ್ ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಇಂದು ಮುಂಜಾನೆ 4.30ರ ಸುಮಾರಿಗೆ ಕಟ್ಟಡದ ಸೆಟ್ರಿಂಗ್ ಕುಸಿದ ಪರಿಣಾಮ ಅಲ್ಲಿದ್ದ ಹಲವು ಕಟ್ಟಡ ಕಾರ್ಮಿಕರು ಅವಶೇಷಗಳಡಿಯಲ್ಲಿ ಕುಸಿದಿದ್ದರು. ಈ ಪೈಕಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೃತರನ್ನು ರಾಕೇಶ್ ಹಾಗೂ ರಾಹುಲ್ ಎಂದು ಗುರುತಿಸಲಾಗಿದೆ. 

ರಾಕೇಶ್ ಹಾಗೂ ರಾಹುಲ್ ಮೂಲತಃ ಬಿಹಾರ ಮೂಲದವರಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದರು. ಅಂತೆಯೇ ಘಟನೆಯಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ಎಪಿಎಂಸಿಯಿಂದ ವಾಹನ ನಿಲುಗಡೆಗೆ ಕಟ್ಟಡ ನಿರ್ಮಾಣವಾಗುತ್ತಿದ್ದು, ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗಿತ್ತು. ಈ ಬಗ್ಗೆ ಆರ್ ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment