Log In
BREAKING NEWS >
ಕೇರಳ ವಿಮಾನ ದುರಂತ: ಮೃತರ ಸಂಖ್ಯೆ 20ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ....

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಸಹಾಯಕ ಅಧಿಕಾರಿಯ ಮನೆ ಮೇಲೆ ಐಟಿ ರೈಡ್

ಇಂದೋರ್: ಆದಾಯ ತೆರಿಗೆ ಅಧಿಕಾರಿಗಳು ಮಧ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿಶೇಷ ಕರ್ತವ್ಯದ ಅಧಿಕಾರಿ ಪ್ರವೀಣ್ ಕಕ್ಕಡ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರವಿವಾರ ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಇಂದೋರ್ ನ ವಿಜಯ ನಗರದ ಪ್ರವೀಣ್ ಕಕ್ಕರ್ ನಿವಾಸಕ್ಕೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು. ದಾಳಿಯ ವೇಳೆಗೆ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರವೀಣ್ ಕಕ್ಕಡ್ ಮಧ್ಯ ಪ್ರದೇಶದ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಕಳೆದ ವರ್ಷ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ನೇಮಕವಾಗಿದ್ದರು.

View image on Twitter
No Comments

Leave A Comment