Log In
BREAKING NEWS >
ಸಮಸ್ತ ಜನತೆಗೆ,ನಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ``````` ಶ್ರೀಕೃಷ್ಣ ಜನ್ಮಾಷ್ಟಮಿಯ(ಚ೦ದ್ರಾ) ಶುಭಾಶಯಗಳು``````ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಮಂಗಳೂರಿಗೆ ಮೋದಿ ಕೊಡುಗೆ ಏನು, ಅವರಿಗೇಕೆ ಮತ ಹಾಕ್ತೀರಿ? ಸಿಎಂ ಕುಮಾರಸ್ವಾಮಿ ಪ್ರಶ್ನೆ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ನೀಡಿದ ಕೊಡುಗೆ ಏನು? ಅವರಿಗೇಕೆ ಮತ ಹಾಕ್ತೀರಿ? ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಡನೆ ಮಾತನಾಡಿದರು.

 

“ಮಂಗಳುರಿಗೆ ಮೋದಿ ಏನು ಮಾಡಿದ್ದಾರೆ? ಅವರು ಇಲ್ಲಿನ ಸಮಸ್ಯೆಗಳನ್ನೇಲ್ಲಾ ಮುಚ್ಚಿ ಹಾಕಿದ್ದಾರೆ. ಇಷ್ಟಾಗಿ ಅವರು ಮಂಗಳೂರಿಗೆ ಬಂದು ನೀಡುವ ಸಂದೇಶವೇನು? ಬಿಜೆಪಿಯವರು ನಳಿನ್ ಮುಖ ನೋಡಬೇಡಿ, ಮೋದಿ ಮುಖ ನೋಡಿ ಮತ ಹಾಕಿ ಅಂತಿದ್ದಾರೆ. ಅಷ್ಟಕ್ಕೂ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದ ಕೊಡುಗೆ ಏನು?” ಅವರು ಪ್ರಶ್ನಿಸಿದ್ದಾರೆ.

ಮಂಗಳೂರಿನ ಅಭಿವೃದ್ದಿಗೆ ಪೂರಕವಾಗಿದ್ದ ಸಂಸ್ಥೆಗಳನ್ನು ಮುಚ್ಚಿಸಿದ್ದಾರೆ. ವಿಮಾನ ನಿಲ್ದಾಣವನ್ನು ಖಾಸಗೀಕರಣ ಮಾಡಿದ್ದಾರೆ. ವಿಜಯಾ ಬ್ಯಾಂಕ್ ಅನ್ನು ಗುಜರಾತ್ ಮೂಲದ ಬ್ಯಾಂಕ್ ನೊಡನೆ ವಿಲೀನಗೊಳಿಸಿದ್ದಾರೆ. ಇದಕ್ಕೆ ಮೋದಿಗೆ ಮತ ಹಾಕ್ತೀರಾ? ಇದು ಮಂಗಳೂರು ಜನರ ಸ್ವಾಭಿಮಾನದ ಪ್ರಶ್ನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 13ರಂದು ಮಂಗಳೂರಿನಲ್ಲಿ ಚುಆವಣಾ ಪ್ರಚಾರ ನಡೆಸಲಿದ್ದಾರೆ. ಇದೇ ದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಹ ಮಂಗಳೂರಿಗೆ ಆಗಮಿಸಬೇಕಾಗಿತ್ತು. ಆದರೆ ಈಗ ರಾಹುಲ್ ಕಾರ್ಯಕ್ರಮವನ್ನು ಒಂದೆರಡು ದಿನಗಳ ಕಾಲ ಮುಂದೂಡಲಾಗಿದೆ.

No Comments

Leave A Comment