Log In
BREAKING NEWS >
ಶ್ರೀಲಂಕಾ ಬಾಂಬ್‌ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು-ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176

ಲೋಕಸಭಾ ಚುನಾವಣೆ 2019; ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ಉತ್ತರಪ್ರದೇಶ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಭರ್ಜರಿ ರೋಡ್ ಶೋ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಹಾಗೂ ಕಾಂಗ್ರೆಸ್ ಮುಖಂಡರು ಜತೆಗಿದ್ದರು.

ಸೋನಿಯಾ ಗಾಂಧಿ 4 ಬಾರಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದು, ಇದೀಗ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ರಾಯ್ ಬರೇಲಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ದಿನೇಶ್ ಪ್ರತಾಪ್ ಸಿಂಗ್ ಅಖಾಡಕ್ಕಿಳಿದಿದ್ದಾರೆ.

ಮಹಾಮೈತ್ರಿಕೂಟವಾದ ಬಹುಜನ್ ಸಮಾಜ್ ಪಕ್ಷ, ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳ ರಾಯ್ ಬರೇಲಿ ಕ್ಷೇತ್ರದಲ್ಲಿ ತಮ್ಮ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಮೇ 6ರಂದು ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

No Comments

Leave A Comment