Log In
BREAKING NEWS >
ಉಡುಪಿಯ ಕಲ್ಸoಕದಲ್ಲಿನ ರಾಯಲ್ ಗಾರ್ಡನಲ್ಲಿ ಡಿ 3 ರಿ೦ದ ಉಡುಪಿ ಉತ್ಸವ ಆರ೦ಭಗೊಳ್ಳಲಿದೆ......ನವೆ೦ಬರ್ 22 ರಿ೦ದ ಕರಾವಳಿಯ ಪ್ರಸಿದ್ಧ ದೇವಾಲಯವಾಸ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವವು ಜರಗಲಿದೆ........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ನೀವು ಜನರನ್ನು ಶಾಂತಿಯಿಂದ ಇರಲು ಬಿಡುವುದಿಲ್ಲ; ಸುಪ್ರೀಂ ಕೋರ್ಟ್ ಛೀಮಾರಿ, ಅಯೋಧ್ಯೆಯಲ್ಲಿ ಪೂಜೆ ಸಲ್ಲಿಕೆಗೆ ಅನುಮತಿ ನಿರಾಕರಣೆ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನಿರಾಕರಿಸಿದೆ.

ಈ ಸಂಬಂಧ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಈ ದೇಶ ಶಾಂತಿಯಿಂದ ಇರುವುದನ್ನು ನೀವು ಬಯಸುವುದಿಲ್ಲ. ಯಾವಾಗಲೂ ಯಾರಾದರೊಬ್ಬರು ಈ ವಿಷಯದಲ್ಲಿ ಮೂಗು ತೂರಿಸುತ್ತಾರೆ ಎಂದು ಅರ್ಜಿದಾರರಿಗೆ ಛೀಮಾರಿ ಹಾಕಿದೆ. ಅಯೋಧ್ಯೆ ಜನರು ಶಾಂತಿಯಿಂದ ಇರುವುದು ನಿಮಗೆ ಇಷ್ಟವಿಲ್ಲವೇ ಎಂದು ನ್ಯಾಯಾಲಯ ಅರ್ಜಿದಾರರಿಗೆ ಪ್ರಶ್ನಿಸಿದೆ.

ಅಲ್ಲದೆ ಅರ್ಜಿದಾರರಿಗೆ 5 ಲಕ್ಷ ವೆಚ್ಚ ನೀಡಬೇಕೆಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಹಿಂತೆಗೆದುಕೊಳ್ಳಲು ಕೂಡ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

No Comments

Leave A Comment